Friday, 22nd November 2024

ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ಅಮರಿಂದರ್ ಸಿಂಗ್ ರಾಜೀನಾಮೆ

ಚಂಢೀಘರ್: ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ನೀಡಿರುವ ರಾಜೀನಾಮೆಯನ್ನು ಪಕ್ಷದ ಅಧ್ಯಕ್ಷ ಸೋನಿಯಾಗಾಂಧಿ ಅಂಗೀಕರಿಸಿದ್ದಾರೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರನ್ನು ರಾಷ್ಟ್ರೀಯ ಕಾಂಗ್ರೆಸ್‍ನ ಪ್ರಾಥಮಿಕ ಸದಸ್ಯತ್ವದಿಂದ ತೆಗೆದು ಹಾಕಿ ಅವರ ರಾಜೀ ನಾಮೆಯನ್ನು ಅಂಗೀಕರಿಸಿದ್ದಾರೆ ತಿಳಿಸಿದ್ದಾರೆ.

ತನ್ನ ಪದಚ್ಯುತಿಗೊಳಿಸಿ ಕಾಂಗ್ರೆಸ್ ಹೈಕಮಾಂಡ್ ಮಧ್ಯರಾತ್ರಿ ಸಂಚು ನಡೆಸಿದೆ. ಹೀಗಾಗಿ ಪಕ್ಷಕ್ಕೆ ರಾಜೀನಾಮೆ ನೀಡಿರುವುದಾಗಿ ಅಮರಿಂದರ್ ಹೇಳಿದ್ದರು.

ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರೊಂದಿಗಿನ ಜಗಳದ ನಡುವೆ ಅಮರಿಂದರ್ ಸಿಂಗ್ ಸೆಪ್ಟೆಂಬರ್‍ನಲ್ಲಿ ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಬೆನ್ನಲ್ಲೇ ತಮ್ಮ ಸ್ವಂತ ಪಕ್ಷದ ಹೆಸರು ಘೋಷಿಸಿರುವ ಅಮರಿಂದ್ ಸಿಂಗ್ ಪಂಜಾಬ್ ಲೋಕ ಕಾಂಗ್ರೆಸ್ ಎಂದು ಹೆಸರಿ ಸಿದ್ದು, ತಮ್ಮ ಪಕ್ಷದ ನೋಂದಣಿ ಚುನಾವಣಾ ಆಯೋಗದ ಅನುಮೋದನೆಗಾಗಿ ಬಾಕಿ ಇದೆ ಎಂದು ತಿಳಿಸಿದ್ದಾರೆ.