Monday, 14th October 2024

ಅನಂತನಾಗ್‌ನಲ್ಲಿ ಎನ್‌ಕೌಂಟರ್

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌ನ ಅಂದ್ವಾನ್ ಸಾಗಮ್ ಪ್ರದೇಶದಲ್ಲಿ ಎನ್‌ಕೌಂಟರ್ ನಡೆದಿದೆ ಎಂದು ಪೊಲೀಸರು ರವಿವಾರ ತಿಳಿಸಿದ್ದಾರೆ.

ಅನಂತ್‌ನಾಗ್‌ನ ಅಂದ್ವಾನ್ ಸಾಗಮ್ ಪ್ರದೇಶದಲ್ಲಿ ಎನ್‌ಕೌಂಟರ್ ಆರಂಭವಾಗಿದೆ. ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ಹೇಳಿದ್ದಾರೆ.

ಶನಿವಾರ ಭಾರತೀಯ ಸೇನಾ ಪಡೆಗಳು ಜಮ್ಮು – ಕಾಶ್ಮೀರದ ಉರಿ ಸೆಕ್ಟರ್‌ನಲ್ಲಿ ಭಯೋ ತ್ಪಾದಕರ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿದವು. ಈ ವೇಳೆ, ಭಯೋತ್ಪಾದ ಕರು ಮತ್ತು ಭಾರತೀಯ ಸೇನಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ.

ಮೇ 3 ರಂದು, ಭಾರತೀಯ ಸೇನೆಯು ಕುಪ್ವಾರದಲ್ಲಿ ಭಯೋತ್ಪಾದಕರ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿತು ಮತ್ತು ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕ ರನ್ನು ಹೊಡೆದುರುಳಿಸಿತು.