Sunday, 15th December 2024

ಕ್ಯಾಂಪ್‌ಬೆಲ್ ಕೊಲ್ಲಿಯಲ್ಲಿ 4.4 ತೀವ್ರತೆಯ ಭೂಕಂಪ

ಅಂಡಮಾನ್ – ನಿಕೋಬಾರ್: ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಕ್ಯಾಂಪ್‌ಬೆಲ್ ಕೊಲ್ಲಿಯಲ್ಲಿ 4.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

ಗುರುವಾರ ಬೆಳಗ್ಗೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಕ್ಯಾಂಪ್‌ಬೆಲ್ ಕೊಲ್ಲಿಯಲ್ಲಿ ಭೂಮಿಯಿಂದ 60 ಕಿಲೋ ಮೀಟರ್ ಆಳದಲ್ಲಿ 4.4 ತೀವ್ರತೆಯ ಭೂಕಂಪ ಸಂಭವಿಸಿದೆ.

ಭೂಕಂಪದಿಂದಾದ ಹಾನಿಯ ಬಗ್ಗೆ ಇದುವರೆಗೂ ಯಾವುದೇ ವರದಿಯಾಗಿಲ್ಲ.