ನವದೆಹಲಿ: ಆಂಧ್ರಪ್ರದೇಶ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜಿತೇಂದ್ರ ಕುಮಾರ್ ಮಹೇಶ್ವರಿ ಅವರನ್ನು ಸಿಕ್ಕಿಂ ಹೈಕೋರ್ಟ್‌ನ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಹಾಗೂ ಸಿಕ್ಕಿಂ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಅರೂಪ್ ಕುಮಾರ್ ಗೋಸ್ವಾಮಿ ಅವರನ್ನು ಆಂಧ್ರಪ್ರದೇಶ ಹೈಕೋರ್ಟ್‌ನ ನೂತನ ಮುಖ್ಯ ನ್ಯಾಯಮೂರ್ತಿಯನ್ನಾಗಿ ವರ್ಗಾಯಿಸ ಲಾಗಿದೆ. ಈ ಬಗ್ಗೆ ಕಾನೂನಿನ ಸಚಿವಾಲಯ ಗುರುವಾರ ಅಧಿಸೂಚನೆ ಹೊರಡಿಸಿದೆ.
ಸರ್ಕಾರವನ್ನು ‘ಅಸ್ಥಿರಗೊಳಿಸಲು’ ರಾಜ್ಯ ಹೈಕೋರ್ಟ್ ಅನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಅವರಿಗೆ ದೂರು ನೀಡಿದ್ದರು.
ಬೆನ್ನಲ್ಲೇ ಸುಪ್ರೀಂ ಕೋರ್ಟ್ ಕೊಲಿಜಿಯಂ, ಆಂಧ್ರಪ್ರದೇಶ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜೆ.ಕೆ. ಮಹೇಶ್ವರಿ ಸೇರಿದಂತೆ ಇತರೆ ಹೈಕೋರ್ಟ್‌ನ ನಾಲ್ಕು ಮುಖ್ಯ ನ್ಯಾಯಮೂರ್ತಿಗಳನ್ನು ವರ್ಗಾವಣೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿತ್ತು.