Friday, 13th December 2024

ಅಮೆರಿಕದಲ್ಲಿ ವ್ಯಾಸಂಗ ಮಾಡುತ್ತಿದ್ದ ಭಾರತೀಯ ಗುಂಡೇಟಿಗೆ ಬಲಿ

ಮರಾವತಿ: ಅಮೆರಿಕದಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದ ಆಂಧ್ರಪ್ರದೇಶ ಮೂಲದ 24 ವರ್ಷದ ಇಂಧನ ಕೇಂದ್ರದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಗುಂಡೇಟಿನಿಂದ ಸಾವನ್ನಪ್ಪಿದ್ದಾನೆ.

ಮೃತನನ್ನು ಸಾಯಿಶ್ ವೀರಾ ಎಂದು ಗುರುತಿಸಲಾಗಿದ್ದು, ರಾಜ್ಯದ ಕೊಲಂಬಸ್ ವಿಭಾಗದಲ್ಲಿ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವೀರಾ ಆಂಧ್ರಪ್ರದೇಶ ಮೂಲದವರು.

ಘಟನೆಯ ಬಗ್ಗೆ ತನಿಖೆ ನಡೆಯುತ್ತಿದ್ದು, ಹತ್ತಿರದ ಸಂಬಂಧಿಕರಿಗೆ ಮಾಹಿತಿ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವೀರಾ ಅವರ ಶವವನ್ನು ಭಾರತಕ್ಕೆ ಕಳುಹಿಸಲು ಮುಂದಾಗಿದ್ದಾರೆ. ಮೃತ ಯುವಕ ತನ್ನ ಸ್ನಾತಕೋತ್ತರ ಕೋರ್ಸ್ ಮಾಡುತ್ತಿದ್ದನು ಮತ್ತು ಪದವಿಗೆ ಕೇವಲ 10 ದಿನಗಳು ಬಾಕಿ ಇರುವಾಗ ಎಚ್ 1 ಬಿ ವೀಸಾ ಅಡಿಯಲ್ಲಿ ಆಯ್ಕೆಯಾಗಿದ್ದಾನೆ ಎನ್ನಲಾಗಿದೆ.