ಭ್ರಷ್ಟಾಚಾರದ ಪ್ರತ್ಯೇಕ ಪ್ರಕರಣದಲ್ಲಿ ವಶಕ್ಕೆ ಪಡೆಯಲು ಮುಂಬೈ ನ್ಯಾಯಾಲಯ ಸಿಬಿಐಗೆ ಅವಕಾಶ ನೀಡಿತ್ತು. ನಿರೀಕ್ಷಣಾ ಜಾಮೀನು ಕೋರಿ ಅನಿಲ್ ದೇಶಮುಖ್ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ಕೋರ್ಟ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.
ಇದೇ ಪ್ರಕರಣಕ್ಕೆ ಸಂಬಂಧಿಸಿ ಈ ಹಿಂದೆ ಮುಂಬೈ ಸೆಷನ್ಸ್ ಕೋರ್ಟ್ ಕೂಡ ನಿರೀಕ್ಷಣಾ ಜಾಮೀನು ಅರ್ಜಿ ಯನ್ನು ತಿರಸ್ಕರಿಸಿತ್ತು. ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್‌ವೀರ್ ಸಿಂಗ್ ಅವರು ದೇಶಮುಖ್ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ ಬಳಿಕ, ಅವರನ್ನು ಗೃಹಸಚಿವ ಸ್ಥಾನದಿಂದ ಕೆಳಗಿಳಿಸಲಾಗಿತ್ತು.
ಕಳೆದ ವರ್ಷದ ನವೆಂಬರ್ 1ರಂದು ಜಾರಿ ನಿರ್ದೇಶನಾಲಯವು (ಇ.ಡಿ) ಅವರನ್ನು ಬಂಧಿಸಿತ್ತು.