Thursday, 12th December 2024

ಸಚಿವ ಅನಿಲ್ ವಿಜ್ ಆರೋಗ್ಯ ಸ್ಥಿತಿ ಗಂಭೀರ

ಚಂಡೀಗಢ : ಹರಿಯಾಣ ಆರೋಗ್ಯ ಸಚಿವ ಅನಿಲ್ ವಿಜ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಚಿಕಿತ್ಸೆಗಾಗಿ ಗುರುಗ್ರಾಮದಲ್ಲಿರುವ ಮೇದಾಂತ ಆಸ್ಪತ್ರೆಯ ಐಸಿಯುಗೆ ದಾಖಲಾಗಿದ್ದಾರೆ.

ಮೇದಾಂತ ಆಸ್ಪತ್ರೆಯ ಆಂತರಿಕ ವೈದ್ಯಕೀಯ ವಿಭಾಗದ ಹಿರಿಯ ನಿರ್ದೇಶಕ ಡಾ.ಸುಶೀಲಾ ಕಟಾರಿಯಾ, ಅನಿಲ್ ​ಗೆ ಚಿಕಿತ್ಸೆ ನೀಡುತ್ತಿದ್ದು, ಶ್ವಾಸಕೋಶ ತೊಂದರೆಯಿಂದ ಸಚಿವರು ಬಳಸುತ್ತಿದ್ದಾರೆ ಎಂದು ವರದಿ ಮಾಡಿವೆ.

ಅನಿಲ್ ವಿಜ್ ಮಂಗಳವಾರ ಸಂಜೆ ಮೇದಾಂತ ಆಸ್ಪತ್ರೆಗೆ ದಾಖಲಾಗಿದ್ದರು. ಈಗ ಅವರಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೊರೋನಾ ಜೊತೆಗೆ ವೈರಲ್ ನ್ಯುಮೋನಿಯಾ ಕೂಡ ಇದೆ ಎಂದು ಆರೋಗ್ಯ ವಿಜ್ಞಾನಗಳ ಸ್ನಾತಕೋತ್ತರ ಕೇಂದ್ರ ಹೇಳಿಕೆ ನೀಡಿತ್ತು.

ಆರೋಗ್ಯ ಸುಧಾರಿಸದ ಹಿನ್ನೆಲೆ ಸಚಿವರನ್ನು ಮೇದಾಂತ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.