Friday, 22nd November 2024

ವೈನ್ ಮಾರಾಟಕ್ಕೆ ಅವಕಾಶ: ಠಾಕ್ರೆಗೆ ಅಣ್ಣಾ ಹಜಾರೆ ಎಚ್ಚರಿಕೆ ಪತ್ರ

ಮುಂಬೈ: ಸೂಪರ್ ಮಾರ್ಕೆಟ್ ಮತ್ತು ವಾಕ್-ಇನ್ ಶಾಪ್‍ಗಳಲ್ಲಿ ವೈನ್ ಮಾರಾಟಕ್ಕೆ ಅವಕಾಶ ನೀಡುವ ಸರ್ಕಾರದ ನಿರ್ಧಾರದ ವಿರುದ್ಧ ಅನಿರ್ದಿಷ್ಟಾ ವಧಿ ಉಪವಾಸ ಸತ್ಯಾಗ್ರಹ ಕೈಗೊಳ್ಳುವುದಾಗಿ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಮಹಾರಾಷ್ಟ್ರದ ಮುಖ್ಯಮಂತ್ರಿ ಠಾಕ್ರೆಗೆ ಪತ್ರ ಬರೆದು ಎಚ್ಚರಿಕೆ ನೀಡಿದ್ದಾರೆ.

ರಾಜ್ಯ ಸರ್ಕಾರ ಇತ್ತೀಚೆಗೆ ಸೂಪರ್‌ ಮಾರ್ಕೆಟ್ ಮತ್ತು ದಿನಸಿ ಅಂಗಡಿಗಳಲ್ಲಿ ವೈನ್ ಮಾರಾಟಕ್ಕೆ ಅನುಮತಿ ನೀಡಲು ನಿರ್ಧರಿಸಿದೆ. ಈ ನಿರ್ಧಾರ ರಾಜ್ಯದ ದುರದೃಷ್ಟಕರ ಮತ್ತು ಮುಂದಿನ ಪೀಳಿಗೆಗೆ ಅಪಾಯಕಾರಿ ಯಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ನಾನು ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ ಮಾಡಲು ನಿರ್ಧರಿಸಿದೆ. ನಾನು ಸಿಎಂ ಮತ್ತು ಉಪ ಮುಖ್ಯಮಂತ್ರಿ (ಅಜಿತ್ ಪವಾರ್) ಅವರಿಗೆ ಪತ್ರ ಕಳುಹಿ ಸಿದ್ದೆ. ಆದರೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಹಜಾರೆ ಹೇಳಿದ್ದಾರೆ.

ವೈನ್ ಮಾರಾಟದ ನಿರ್ಧಾರದ ವಿರುದ್ಧ ಮಹಾರಾಷ್ಟ್ರದಲ್ಲಿ ಏಕಕಾಲದಲ್ಲಿ ಆಂದೋಲನ ನಡೆಸಲಾಗುವುದು ಎಚ್ಚರಿಕೆ ನೀಡಿದ್ದಾರೆ.