Friday, 13th December 2024

ಅರಾವಕುರಿಚಿ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದ ಅಣ್ಣಾಮಲೈ

ಚೆನ್ನೈ: ಮಾಜಿ ಐಪಿಎಸ್ ಅಧಿಕಾರಿ, ತಮಿಳುನಾಡು ಬಿಜೆಪಿ ಉಪಾಧ್ಯಕ್ಷ ಅಣ್ಣಾಮಲೈ ಅವರು ಗುರುವಾರ ಅರಾವಕುರಿಚಿ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದರು.

ತಮಿಳುನಾಡು ವಿಧಾನಸಭಾ ಚುನಾವಣೆಗೆ ಅರಾವಕುರಿಚಿ ಕ್ಷೇತ್ರದಲ್ಲಿ ಅಣ್ಣಾಮಲೈ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಸಂಸದ, ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಮತ್ತು ಸಚಿವ ಮುನಿರತ್ನ ಭಾಗವಹಿಸಿದ್ದರು.

ಕರ್ನಾಟಕದಲ್ಲಿ ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ನಂತರ ರಾಜೀನಾಮೆ ನೀಡಿ, ಬಿಜೆಪಿಗೆ ಸೇರ್ಪಡೆಯಾಗಿದ್ದ ಅವರು ಪಕ್ಷ ಸಂಘಟನೆಗೆ ಕೆಲಸ ಮಾಡಿದ್ದರು.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ

https://www.facebook.com/Vishwavanidaily