Thursday, 12th December 2024

ಮೋದಿ ಸಂಪುಟದಲ್ಲಿ ಅಣ್ಣಾಮಲೈ ರಾಜ್ಯ ಸಚಿವರಾಗಿ ಸೇರ್ಪಡೆ…!

ವದೆಹಲಿ: ಕೊಯಮತ್ತೂರು ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಾಜಿ ಐಪಿಎಸ್ ಅಧಿಕಾರಿ, ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ ಪರಾಭವಗೊಂಡಿದ್ದರೂ, ಕೇಂದ್ರ ಸಚಿವರಾಗುವ ಅವಕಾಶ ಒದಗಿ ಬಂದಿದೆ.

ಪ್ರಧಾನಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕರಿಸಲಿದ್ದು, ಅಣ್ಣಾಮಲೈ ಅವರು ರಾಜ್ಯ ಸಚಿವರಾಗಿ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗಿದೆ.

ಸತತ ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಮೋದಿ ಸಂಪುಟಕ್ಕೆ 30 ಮಂದಿ ಸಚಿವರು ಸೇರ್ಪಡೆಯಾಗಲಿದ್ದಾರೆ. ಅಣ್ಣಾಮಲೈ ಅವರು ಕೂಡ ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.

2019ರಲ್ಲಿ ಬಿಜೆಪಿ ಸೇರಿದ ಅಣ್ಣಾಮಲೈ ಅವರಿಗೆ 2021 ರಲ್ಲಿ ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಸ್ಥಾನ ನೀಡಲಾಗಿತ್ತು. ರಾಜ್ಯಾದ್ಯಂತ ಸಂಚರಿಸಿ ಪಕ್ಷವನ್ನು ಸಂಘಟಿಸಿದ ಅಣ್ಣಾಮಲೈ ಈ ಲೋಕಸಭೆ ಚುನಾವಣೆಯಲ್ಲಿ ಕೊಯಮುತ್ತೂರು ಕ್ಷೇತ್ರದಲ್ಲಿ ಅವರು ಡಿಎಂಕೆ ಅಭ್ಯರ್ಥಿ ವಿರುದ್ಧ ಪರಾಭವಗೊಂಡಿದ್ದರೂ, ರಾಜ್ಯದಲ್ಲಿ ಬಿಜೆಪಿಗೆ ಹೆಚ್ಚು ಮತಗಳನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಅವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಂಡು ತಮಿಳುನಾಡಿನಲ್ಲಿ ಬಿಜೆಪಿ ಸಂಘಟನೆಗೆ ಒತ್ತು ನೀಡಲಾಗುವುದು ಎಂದು ಹೇಳಲಾಗಿದೆ.