Saturday, 14th December 2024

ಅನುಬ್ರತಾ ಸಿಬಿಐ ಕಸ್ಟಡಿ ಆ.24ರವರೆಗೆ ವಿಸ್ತರಣೆ

ಕೋಲ್ಕತ್ತ: ಜಾನುವಾರು ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ತೃಣಮೂಲ ಕಾಂಗ್ರೆಸ್ ನಾಯಕ ಅನುಬ್ರತಾ ಮೊಂಡಲ್ ಅವರ ಸಿಬಿಐ ಕಸ್ಟಡಿಯನ್ನು ಆ.24ರವರೆಗೆ ವಿಸ್ತರಣೆ ಮಾಡಲಾಗಿದೆ.

ಪ್ರಕರಣದ ವಿಚಾರಣೆ ನಡೆಸಿದ ಸಿಬಿಐ ನ್ಯಾಯಾಲಯ ಅನುಬ್ರತಾ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದು, ಕಸ್ಟಡಿ ವಿಸ್ತರಣೆ ಮಾಡಿದೆ.

ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಜಾನುವಾರು ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿ ಆ.11ರಂದು ಮೊಂಡಲ್ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದರು.

ಮೊಂಡಲ್‌ ಅವರು ಬೀರ್‌ಭೂಮ್‌ನ ಟಿಎಂಸಿಯ ಜಿಲ್ಲಾ ಘಟಕದ ಅಧ್ಯಕ್ಷರಾಗಿದ್ದಾರೆ. ಇತ್ತೀಚೆಗಷ್ಟೇ ಮೊಂಡಲ್ ಅವರಿಗೆ ಸೇರಿದ್ದು ಎನ್ನಲಾದ ₹ 16.97 ಕೋಟಿ ಮೌಲ್ಯದ ಸ್ಥಿರ ಠೇವಣಿಯನ್ನು ಸಿಬಿಐ ಮುಟ್ಟುಗೋಲು ಹಾಕಿಕೊಂಡಿತ್ತು.