Saturday, 14th December 2024

ವಾರ್ತಾ, ಪ್ರಚಾರ ಖಾತೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಅನುರಾಗ್ ಠಾಕೂರ್

ನವದೆಹಲಿ: ಹಿಮಾಚಲ ಪ್ರದೇಶದ ಹಮಿರ್‌ಪುರ ಕ್ಷೇತ್ರದ ಲೋಕಸಭಾ ಸದಸ್ಯರಾಗಿರುವ ಅನುರಾಗ್ ಠಾಕೂರ್ ಅವರು ಗುರುವಾರ ವಾರ್ತಾ ಮತ್ತು ಪ್ರಚಾರ ಖಾತೆ ಸಚಿವರಾಗಿ ಅಧಿಕಾರ ಸ್ವೀಕರಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ ಏಳು ವರ್ಷಗಳಲ್ಲಿ ಪ್ರಧಾನಿಯವರು ಇಲಾಖೆ ಮೂಲಕ ದೇಶದ ಮೂಲೆ ಮೂಲೆಯಲ್ಲಿರುವ ಜನರನ್ನು ತಲುಪುವ ಮೂಲಕ, ಅತ್ಯುತ್ತಮ ಕೆಲಸಗಳನ್ನು ಮಾಡಿದ್ದಾರೆ. ಅವರ ಕಾರ್ಯವನ್ನು ಮುಂದಕ್ಕೆ ತೆಗೆದುಕೊಂಡು ಹೋಗುತ್ತೇನೆ’ ಎಂದು ತಿಳಿಸಿದರು.

ಪ್ರಧಾನಿಯವರು ನನ್ನ ಮೇಲೆ ವಿಶ್ವಾಸವಿಟ್ಟು ನೀಡಿರುವ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುತ್ತೇನೆ’ ಎಂದು ಹೇಳಿದರು.