Sunday, 15th December 2024

ಸಹಾಯಕ ಪೊಲೀಸ್ ಇನ್ಸ್‌ಪೆಕ್ಟರ್ ಸಚಿನ್‌ ವಾಜೆ ಅಮಾನತು

ಮುಂಬೈ: ಉದ್ಯಮಿ ಮುಖೇಶ್‌ ಅಂಬಾನಿ ಅವರ ಮನೆ ಬಳಿ ಸ್ಫೋಟಕಗಳಿದ್ದ ವಾಹನ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾದ ಸಹಾಯಕ ಪೊಲೀಸ್ ಇನ್ಸ್‌ಪೆಕ್ಟರ್ ಸಚಿನ್‌ ವಾಜೆ ಅವರನ್ನು ಸೋಮವಾರ ಅಮಾನತುಗೊಳಿಸಲಾಗಿದೆ.

‘ಪೊಲೀಸ್ ವಿಶೇಷ ಶಾಖೆಯ ಹೆಚ್ಚುವರಿ ಆಯುಕ್ತರ ಆದೇಶದಂತೆ ಸಚಿನ್‌ ವಾಜೆರನ್ನು ಅಮಾನತು ಮಾಡಲಾಗಿದೆ’ ಎಂದು ಪೊಲೀಸ್‌ ಉಪ ಆಯುಕ್ತ ಎಸ್‌.ಚೈತನ್ಯ ತಿಳಿಸಿದರು.

ಶನಿವಾರ ಸಚಿನ್‌ ವಾಜೆ ಅವರನ್ನು ಬಂಧಿಸಲಾಗಿತ್ತು. ಅಂಬಾನಿ ನಿವಾಸದ ಮುಂದೆ ಪತ್ತೆಯಾದ ಸ್ಕಾರ್ಪಿಯೋ ಕಾರಿನ ಮಾಲೀಕ ಮುನ್‌ಸುಖ್‌ ಹಿರೇನ್ ಅವರ ಹತ್ಯೆ ಪ್ರಕರಣದ ಆರೋಪವನ್ನೂ ಎದುರಿಸುತ್ತಿದ್ದಾರೆ.

ಕ್ಷಣ ಕ್ಷಣದ ಸುದ್ದಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್ ಲೈಕ್‌ ಮಾಡಿ.

https://www.facebook.com/Vishwavanidaily