Friday, 20th September 2024

ITBP Recruitment 2024: ಇಂಡೋ-ಟಿಬೇಟಿಯನ್‌ ಬಾರ್ಡರ್‌ ಪೊಲೀಸ್‌ ಫೋರ್ಸ್‌ನಲ್ಲಿದೆ ಉದ್ಯೋಗಾವಕಾಶ; ಹೀಗೆ ಅಪ್ಲೈ ಮಾಡಿ

ಬೆಂಗಳೂರು: 10, 12ನೇ ತರಗತಿ, ಡಿಪ್ಲೋಮಾ ಓದಿ ಒಂದೊಳ್ಳೆ ಉದ್ಯೋಗ ಅರಸುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಸುವರ್ಣಾವಕಾಶ. ಇಂಡೋ-ಟಿಬೇಟಿಯನ್‌ ಬಾರ್ಡರ್‌ ಪೊಲೀಸ್‌ ಫೋರ್ಸ್‌ (Indo-Tibetan Border Police Force) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (ITBP Recruitment 2024). ಹೆಡ್‌ ಕಾನ್ಸ್‌ಟೇಬಲ್‌, ಕಾನ್ಸ್‌ಟೇಬಲ್‌ ಹುದ್ದೆಗಳಿವೆ. ಒಟ್ಟು 128 ಹುದ್ದೆಗಳಿಗೆ ನೇಮಕ ನಡೆಯಲಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಸೆಪ್ಟೆಂಬರ್‌ 29. ಈ ಹಿಂದೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್‌ 10 ಕೊನೆಯ ದಿನ ಎಂದು ಹೇಳಲಾಗಿತ್ತು. ಇದೀಗ ತಾಂತ್ರಿಕ ಕಾರಣಗಳಿಂದ ಸೆಪ್ಟೆಂಬರ್‌ 29ರವರೆಗೆ ಕೊನೆಯ ದಿನಾಂಕವನ್ನು ಮುಂದೂಡಲಾಗಿದೆ (Job Guide).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಹೆಡ್‌ ಕಾನ್ಸ್‌ಟೇಬಲ್‌ – 9 ಹುದ್ದೆ, ವಿದ್ಯಾರ್ಹತೆ: 12ನೇ ತರಗತಿ (ದ್ವಿತೀಯ ಪಿಯುಸಿ) ಡಿಪ್ಲೋಮಾ ತೇರ್ಗಡೆ
ಕಾನ್ಸ್‌ಟೇಬಲ್‌ – 119 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ ತೇರ್ಗಡೆ

ವಯೋಮಿತಿ

ಹೆಡ್‌ ಕಾನ್ಸ್‌ಟೇಬಲ್‌ (Dresser Veterinary) – 18-27 ವರ್ಷ
ಕಾನ್ಸ್‌ಟೇಬಲ್‌ (ಅನಿಮಲ್‌ ಟ್ರಾನ್ಸ್‌ಪೋರ್ಟ್‌-Animal Transport)-18-25 ವರ್ಷ
ಕಾನ್ಸ್‌ಟೇಬಲ್‌ (ಕೆನ್ನಾಲ್‌ಮ್ಯಾನ್‌-Kennelman) -18-27 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಮಾಜಿ ಸೈನಿಕರಿಗೆ 8 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಎಸ್‌ಸಿ / ಎಸ್‌ಟಿ / ಮಾಜಿ ಸೈನಿಕರು / ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇಲ್ಲ. ಇತರ ಎಲ್ಲಾ ವಿಭಾಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 100 ರೂ. ಅನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕು. ಫಿಸಿಕಲ್‌ ಸ್ಟ್ಯಾಂಡರ್ಡ್‌ ಟೆಸ್ಟ್‌, ಲಿಖಿತ ಪರೀಕ್ಷೆ, ದಾಖಲಾತಿ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಮಾಸಿಕ ವೇತನ 

ಆಯ್ಕೆಯಾದವರಿಗೆ ಹೆಡ್‌ ಕಾನ್ಸ್‌ಟೇಬಲ್‌ ಹುದ್ದೆಗೆ – 25,500 ರೂ.- 81,000 ರೂ. ಮತ್ತು ಕಾನ್ಸ್‌ಟೇಬಲ್‌ ಹುದ್ದೆಗೆ – 21,700 ರೂ. – 69,100 ರೂ. ಮಾಸಿಕ ವೇತನ ದೊರೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ITBP Recruitment 2024 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್‌ ಮಾಡಿ.

Online application

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://recruitment.itbpolice.nic.in/rect/registrations/applicant-signup)
  • ಮೊದಲಿಗೆ ಹೆಸರು ನೋಂದಾಯಿಸಿ.
  • ಅಗತ್ಯ ಮಾಹಿತಿಗಳನ್ನು ನೀಡಿ ಅರ್ಜಿ ಭರ್ತಿ ಮಾಡಿ.
  • ಅಗತ್ಯ ದಾಖಲೆ, ಫೋಟೊಗಳನ್ನು ಸರಿಯಾದ ಅಳತೆಯಲ್ಲಿ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ನಂಬರ್‌ ಅಥವಾ ರಿಕ್ವೆಸ್ಟ್‌ ನಂಬರ್‌ ನೋಟ್‌ ಮಾಡಿಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಇಂಡೋ-ಟಿಬೇಟಿಯನ್‌ ಬಾರ್ಡರ್‌ ಪೊಲೀಸ್‌ ಫೋರ್ಸ್‌ನ ವೆಬ್‌ಸೈಟ್‌ ವಿಳಾಸ:‌ ecruitment.itbpolice.nic.inಕ್ಕೆ ಭೇಟಿ ನೀಡಿ.

ಈ ಸುದ್ದಿಯನ್ನೂ ಓದಿ: Job Guide: ಐಡಿಬಿಐ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ಹೀಗೆ ಅಪ್ಲೈ ಮಾಡಿ