ಘಾನೆ ಸಂಭವಿಸಿದ ಕೂಡಲೇ ದಾಸ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದ್ರೆ, ಅವರು ಈಗಾಗಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ದ್ವಿಚಕ್ರ ವಾಹನ ದಲ್ಲಿದ್ದ ಇನ್ನೊಬ್ಬ ವ್ಯಕ್ತಿ ಗಾಯಗೊಂಡಿದ್ದು, ಕಟಕ್ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸಾಗಿಸಲಾಗಿದ್ದು, ಸ್ಥಿತಿ ಗಂಭೀರವಾಗಿದೆ’ ಎಂದು ಅಧಿಕಾರಿ ಹೇಳಿದರು.
ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ನೇತೃತ್ವದ ಭಾರತ್ ರಾಷ್ಟ್ರ ಸಮಿತಿಗೆ ದಾಸ್ ಇತ್ತೀಚೆಗೆ ಸೇರ್ಪಡೆಗೊಂಡಿದ್ದರು. ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಳ್ಳಲು ದಾಸ್ ಜಾಜ್ಪುರದಿಂದ ಭುವನೇಶ್ವರಕ್ಕೆ ಪ್ರಯಾಣಿಸುತ್ತಿದ್ದಾಗ ಅಪಘಾತ ಸಂಭವಿಸಿದೆ.