ಪುರ್ಬಾ ಮೇದಿನಿಪುರ ಜಿಲ್ಲೆಯ ಎಗ್ರಾದಲ್ಲಿ ನಡೆದ ಸ್ಫೋಟದಲ್ಲಿ 12 ಜನರು ಬಲಿಯಾ ಗಿದ್ದು ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ‘ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿಲ್ಲ ಎಂದು ನಾನು ಭಾವಿಸುತ್ತೇನೆ. ಮೊದಲು ಈ ಬಗ್ಗೆ ಸಮೀಕ್ಷೆ ನಡೆಸಿ ನಂತರ ಮಾತನಾಡುತ್ತೇನೆ’ ಎಂದು ಹೇಳಿದರು.
ಮಮತಾ ಬ್ಯಾನರ್ಜಿ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಭೇಟಿ ಬಗ್ಗೆ ಮಾತನಾಡಿದ ಅವರು, ‘ ಅಧಿಕಾರಿಗಳ ವರ್ಗಾವಣೆ ಮತ್ತು ನಿಯೋಜನೆಗೆ ಸೇರಿದಂತೆ ದೆಹಲಿ ಆಡಳಿತಾತ್ಮಕ ವಿಷಯಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ತಂದಿದೆ.
ಭಾನುವಾರ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ಮಾತುಕತೆ ನಡೆಸಿದ ಕೇಜ್ರಿವಾಲ್, ಕೇಂದ್ರದ ಸುಗ್ರೀವಾಜ್ಞೆ ವಿರುದ್ಧ ತಮಗೆ ಬೆಂಬಲ ಸೂಚಿಸುವಂತೆ ಬಿಜೆಪಿಯೇತರ ಮುಖ್ಯಮಂತ್ರಿಗಳನ್ನು ಭೇಟಿ ಮಾಡುತ್ತಿದ್ದಾರೆ’ ಎಂದು ಹೇಳಿದರು.
ತಮ್ಮ ವಿರುದ್ಧದ ಭ್ರಷ್ಟಾಚಾರದ ಆರೋಪಗಳು ಬಹಿರಂಗವಾಗಿ ಹೊರಬರುತ್ತಿರುವುದಕ್ಕೆ ಕೇಜ್ರಿವಾಲ್ ಅಸಮಾಧಾನಗೊಂಡಿ ದ್ದಾರೆ ಎಂದು ಹೇಳಿದರು.