Friday, 22nd November 2024

ಕಮಾಂಡರ್‌ಗಳ ನಾಲ್ಕು ದಿನಗಳ ದ್ವೈವಾರ್ಷಿಕ ಸಮಾವೇಶ ಇಂದಿನಿಂದ

ನವದೆಹಲಿ: ಭಾರತೀಯ ಸೇನೆಯ ಉನ್ನತ ಕಮಾಂಡರ್‌ಗಳ ನಾಲ್ಕು ದಿನಗಳ ದ್ವೈವಾರ್ಷಿಕ ಸಮಾವೇಶ ಸೋಮವಾರದಿಂದ  ನವದೆಹಲಿಯಲ್ಲಿ ಆರಂಭವಾಗಲಿದೆ.

ಸೇನೆಯ ಸಂಪನ್ಮೂಲಗಳ ಪರಿಣಾಮಕಾರಿ ಬಳಕೆ, ಕಾರ್ಯಾಚರಣೆ ಸಾಮರ್ಥ್ಯ ವೃದ್ಧಿ ಸೇರಿದಂತೆ ವಿವಿಧ ವಿಷಯಗಳಿಗೆ ಸಂಬಂಧಿಸಿ ಆಂತರಿಕ ಸಮಿತಿಗಳು ಮಾಡಿರುವ ಶಿಫಾರಸುಗಳ ಕುರಿತು ಈ ಸಮಾವೇಶದಲ್ಲಿ ಚರ್ಚಿಸಲಾಗುತ್ತದೆ ಎಂದು ಮೂಲ ಗಳು ಹೇಳಿವೆ.

ಸಮಾವೇಶದಲ್ಲಿ ಸೇನೆಯ ಉನ್ನತ ಅಧಿಕಾರಿಗಳು, ಸೇನಾ ಕಮಾಂಡರ್‌ಗಳು, ಸೇನಾ ಮುಖ್ಯ ಕಚೇರಿಯ ಸಿಬ್ಬಂದಿ ವಿಭಾಗದ ಮುಖ್ಯಾಧಿಕಾರಿಗಳು (ಪಿಎಸ್‌ಒ) ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಮೂರನೇ ದಿನ ಅಂಡಮಾನ್ ಮತ್ತು ನಿಕೋಬಾರ್ ಕಮಾಂಡ್‌ನ ಮುಖ್ಯಸ್ಥರು ಸೇರಿದಂತೆ ವಿವಿಧ ಸೇನಾ ಕಮಾಂಡರ್‌ಗಳು ಯೋಜಿಸಿರುವ ವಿವಿಧ ಕಾರ್ಯಸೂಚಿಗಳ ಕುರಿತು ಆಳವಾದ ಚರ್ಚೆ ನಡೆಯಲಿದೆ. ಇದಾದ ನಂತರ ವಿವಿಧ ಪ್ರಧಾನ ಸಿಬ್ಬಂದಿ ಅಧಿಕಾರಿಗಳಿಂದ ವಿವಿಧ ವಿಷಯಗಳ ಬಗ್ಗೆ ಸಂಕ್ಷಿಪ್ತವಾಗಿ ಚರ್ಚೆ ನಡೆಯಲಿವೆ.

ನಾಲ್ಕನೇ ಮತ್ತು ಕೊನೆಯ ದಿನ ಸಮಾವೇಶದಲ್ಲಿ ಗಡಿ ರಸ್ತೆಗಳ ಪ್ರಧಾನ ನಿರ್ದೇಶಕರಯ (ಡಿಜಿಬಿಆರ್) ಗಡಿ ರಸ್ತೆಗಳ ಸಂಘ ಟನೆಯು (ಬಿಆರ್‌ಒ) ಕೈಗೊಳ್ಳುತ್ತಿರುವ ವಿವಿಧ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳು ಮತ್ತು ಸಂಯೋಜಿತ ನವೀಕರಣದ ಬಗ್ಗೆ ಮಾಹಿತಿ ನೀಡಲಿದ್ದಾರೆ.