Friday, 13th December 2024

ಅರ್ನಬ್ ಗೋಸ್ವಾಮಿ ಜಾಮೀನು ಅರ್ಜಿ ತಿರಸ್ಕೃತ

ನವದೆಹಲಿ : ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣದಲ್ಲಿ ಮುಂಬೈ ಪೊಲೀಸರಿಂದ ಬಂಧನಕ್ಕೆ ಒಳಗಾಗಿ ಜೈಲು ಸೇರಿರುವ ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಬ್ ಗೋಸ್ವಾಮಿ ಬಾಂಬೆ ಹೈಕೋರ್ಟ್’ನಲ್ಲಿ ಸಲ್ಲಿಸಿದ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ.

2018ರ ಆತ್ಮಹತ್ಯೆ ಪ್ರಚೋದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ದಿನಗಳ ಹಿಂದೆ ಅರ್ನಬ್ ಗೋಸ್ವಾಮಿ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದರು. ನಂತರ ಅರ್ನಬ್ ಬಾಂಬೆ ಹೈಕೋರ್ಟ್ ಗೆ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು.

ಇಂದು ಜಾಮೀನು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಜಾಮೀನಿಗಾಗಿ ಕೆಳಹಂತದ ನ್ಯಾಯಾಲಯಕ್ಕೆ ಮೊದಲು ಅರ್ಜಿ ಸಲ್ಲಿಸುವಂತೆ ಸೂಚಿಸಿ, ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.