ವಿಧಿಯನ್ನು ರದ್ದುಗೊಳಿಸಿದ ನಾಲ್ಕು ವರ್ಷಗಳ ನಂತರ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಸಂವಿಧಾನ ಪೀಠವು 20 ಅರ್ಜಿಗಳ ವಿಚಾರಣೆಯನ್ನು ನಡೆಸ ಲಿದೆ.
ಮುಖ್ಯನ್ಯಾಯಮೂರ್ತಿ ಡಿ. ಚಂದ್ರಚೂಡ್ ಸೇರಿದಂತೆ ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಬಿಆರ್ ಗವಾಯಿ ಮತ್ತು ಸೂರ್ಯ ಕಾಂತ್ ಅವರನ್ನು ಒಳಗೊಂಡ 5 ನ್ಯಾಯಮೂರ್ತಿಗಳಿರುವ ಪೀಠ ವಿಚಾರಣೆ ನಡೆಸಲಿದೆ.
2019ರ ಆಗಸ್ಟ್ 6 ರಂದು ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರ ಲಡಾಖ್, ಜಮ್ಮು ಮತ್ತು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿತ್ತು.