Wednesday, 6th November 2024

370ನೇ ವಿಧಿ ರದ್ದು ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆ ಆಗಸ್ಟ್ 2ರಿಂದ

ವದೆಹಲಿ : ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿ ಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ಆಗಸ್ಟ್ 2ರಿಂದ ಆರಂಭಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.

ಸೋಮವಾರ ಮತ್ತು ಶುಕ್ರವಾರ ಹೊರತುಪಡಿಸಿ ಪ್ರತಿದಿನವೂ ಪ್ರಕರಣದ ವಿಚಾರಣೆ ನಡೆಯಲಿದೆ ಎಂದು ಕೋರ್ಟ್ ಹೇಳಿದೆ. ಮಂಗಳವಾರ ಪ್ರಕರಣದ ವಿಚಾರಣೆ ನಡೆಸಿದ ಸಿಜೆಐ ಡಿವೈ ಚಂದ್ರಚೂಡ್ ನೇತೃತ್ವದ ಸಾಂವಿಧಾನಿಕ ಪೀಠವು ಜು.೨೭ ರೊಳಗೆ ಎಲ್ಲಾ ದಾಖಲೆಗಳನ್ನು ಲಿಖಿತ ರೂಪದಲ್ಲಿ ಸಲ್ಲಿಸಬೇಕು ಎಂದು ಹೇಳಿದೆ.

ದಾಖಲೆಗಳನ್ನು ನಿರ್ವಹಿಸಲು ಇಬ್ಬರು ವಕೀಲರನ್ನು ನೊಡೆಲ್ ಅಧಿಕಾರಿಗಳಾಗಿ ನೇಮಿಸಲಾಗುವುದು ಎಂದು ಪೀಠ ಹೇಳಿದೆ.

ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಿದ ಸಂವಿಧಾನದ ೩೭೦ ನೇ ವಿಧಿಯನ್ನು ರದ್ದುಗೊಳಿಸಿದ ಸುಮಾರು ನಾಲ್ಕು ವರ್ಷಗಳ ಬಳಿಕ ವಿಚಾರಣೆ ನಡೆಯು ತ್ತಿದ್ದು,ಮುಖ್ಯನ್ಯಾಯಮೂರ್ತಿ ಡಿ. ಚಂದ್ರಚೂಡ್ ಸೇರಿದಂತೆ ನ್ಯಾಯಮೂರ್ತಿ ಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಬಿಆರ್ ಗವಾಯಿ ಮತ್ತು ಸೂರ್ಯ ಕಾಂತ್ ಅವರನ್ನು ಒಳಗೊಂಡ ೫ ನ್ಯಾಯ ಮೂರ್ತಿಗಳಿರುವ ಪೀಠ ವಿಚಾರಣೆ ನಡೆಸಲಿದೆ ಎಂದು ತಿಳಿದು ಬಂದಿದೆ.