ಇತ್ತೀಚೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಕುರಿತು ತಿರುಚಿದ ವಿಡಿಯೊ ಪ್ರಸಾರ ಮಾಡಿದ ಆರೋಪದಡಿ ನಿರೂಪಕ ರೋಹಿತ್ ರಂಜನ್ ಅವರನ್ನು ಬಂಧಿಸಿದ ನೊಯ್ಡಾ ಪೊಲೀಸರು, ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದರು.
ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇರೆಗೆ ಉತ್ತರಪ್ರದೇಶದ ಸೀತಾಪುರ ಜಿಲ್ಲೆಯಲ್ಲಿ ‘ಆಲ್ಟ್‌ನ್ಯೂಸ್’ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ ಅವರನ್ನು ಇತ್ತೀಚೆಗೆ ಪೊಲೀಸರು ಬಂಧಿಸಿದ್ದರು.