Sunday, 15th December 2024

ಅರವಿಂದ ಕೇಜ್ರಿವಾಲ್’ಗೆ ಮಧ್ಯಂತರ ಜಾಮೀನು ನೀಡಲು ಇ.ಡಿ ಆಕ್ಷೇಪ

ವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನದಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡುವುದಕ್ಕೆ ಜಾರಿ ನಿರ್ದೇಶನಾಲಯ ಆಕ್ಷೇಪ ವ್ಯಕ್ತಪಡಿಸಿದೆ.

ಕೇಜ್ರಿವಾಲ್ ಸಲ್ಲಿಸಿರುವ ಮಧ್ಯಂತರ ಜಾಮೀನು ಅರ್ಜಿಯನ್ನು ವಿರೋಧಿಸಿ ಇ.ಡಿ ಅಫಿಡವಿಟ್ ಸಲ್ಲಿಸಿದೆ. ಕಾನೂನು ಎಲ್ಲರಿಗೂ ಸಮಾನವಾಗಿದೆ. ಚುನಾವಣಾ ಪ್ರಚಾರ ಮೂಲಭೂತ, ಸಾಂವಿಧಾನಿಕ ಅಥವಾ ಕಾನೂನುಬದ್ಧ ಹಕ್ಕಲ್ಲ ಎಂದು ಅದು ಹೇಳಿದೆ.

ಯಾವುದೇ ರಾಜಕೀಯ ನಾಯಕರಿಗೆ ಚುನಾವಣಾ ಪ್ರಚಾರಕ್ಕಾಗಿ ಜಾಮೀನು ನೀಡಿಲ್ಲ. ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡಿದರೆ ತಪ್ಪು ನಡವಳಿಗೆ ಕಾರಣವಾಗುತ್ತದೆ ಎಂದು ಇ.ಡಿ ಹೇಳಿದೆ.

ಜಾರಿ ನಿರ್ದೇಶನಾಲಯ (ಇ.ಡಿ) ತಮ್ಮನ್ನು ಬಂಧಿಸಿರುವ ಕ್ರಮ ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಪೀಠ ಮಂಗಳವಾರ ವಿಚಾರಣೆ ನಡೆಸಿತ್ತು.