Monday, 16th September 2024

ಕೇಜ್ರಿವಾಲ್ ಅರ್ಜಿಯ ತುರ್ತು ವಿಚಾರಣೆಗೆ ನಿರಾಕರಣೆ

ವದೆಹಲಿ: ವೈದ್ಯಕೀಯ ಕಾರಣಗಳಿಗಾಗಿ ಮಧ್ಯಂತರ ಜಾಮೀನು ಅವಧಿಯನ್ನು ಏಳು ದಿನಗಳವರೆಗೆ ವಿಸ್ತರಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆಗೆ ಅನುಮತಿ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ.

ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ಪ್ರಾರಂಭವಾದ ತಕ್ಷಣ, ಅಭಿಷೇಕ್ ಮನು ಸಿಂಘ್ವಿ ನಮಗೆ ಇನ್ನೂ ಏಳು ದಿನಗಳ ಮಧ್ಯಂತರ ಜಾಮೀನು ವಿಸ್ತರಿಸ ಬೇಕೆಂದು ಹೇಳಿದರು. ವೈದ್ಯಕೀಯ ಪರೀಕ್ಷೆಗಳನ್ನು ಮಾಡಬೇಕಾಗಿದೆ. ಇದು ನ್ಯಾಯಾಲಯ ನೀಡಿರುವ ಸ್ವಾತಂತ್ರ್ಯದ ದುರ್ಬಳಕೆಯಲ್ಲ ಎಂದರು.

ವೈದ್ಯಕೀಯ ಕಾರಣಗಳಿಗಾಗಿ ಮಧ್ಯಂತರ ಜಾಮೀನನ್ನು 7 ದಿನಗಳವರೆಗೆ ವಿಸ್ತರಿಸುವಂತೆ ಅರವಿಂದ್ ಕೇಜ್ರಿವಾಲ್ ಅವರು ಸುಪ್ರೀಂಕೋರ್ಟ್‌ಗೆ ಮನವಿ ಮಾಡಿದ್ದರು. ಆದರೆ ಜಾಮೀನು ಅವಧಿ ವಿಸ್ತರಣೆಗೆ ಸುಪ್ರೀಂಕೋರ್ಟ್ ನಿರಾಕರಿಸಿತು.

ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿದೆ. ಅವರು ಜೂನ್ 2 ರಂದು ಮತ್ತೆ ತಿಹಾರ್ ಜೈಲಿಗೆ ಹೋಗಬೇಕಾಗಿದೆ. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿ ಮದ್ಯ ನೀತಿ ಹಗರಣದಲ್ಲಿ ಬಂಧಿಸಲಾಗಿತ್ತು.

Leave a Reply

Your email address will not be published. Required fields are marked *