Monday, 16th September 2024

ಕೇಜ್ರಿವಾಲ್, ಕೆ ಕವಿತಾ ನ್ಯಾಯಾಂಗ ಬಂಧನ ವಿಸ್ತರಣೆ

ವದೆಹಲಿ: ದೆಹಲಿ ಅಬಕಾರಿ ನೀತಿಯಲ್ಲಿನ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 2 ರವರೆಗೆ ವಿಸ್ತರಿಸಲಾಗಿದೆ.

ರೂಸ್ ಅವೆನ್ಯೂ ನ್ಯಾಯಾಲಯವು ಮಂಗಳವಾರ ಇಬ್ಬರೂ ನಾಯಕರ ಕಸ್ಟಡಿಯನ್ನು ವಿಸ್ತರಿಸಿದೆ.

ಅರವಿಂದ್ ಕೇಜ್ರಿವಾಲ್, ಕೆ ಕವಿತಾ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದರು. ನ್ಯಾಯಾಲಯವು ಸೆಪ್ಟೆಂಬರ್ 2 ರಂದು ಮುಖ್ಯ ಪ್ರಕರಣದ ವಿಚಾರಣೆ ನಡೆಸಲಿದೆ.

ಜಾಮೀನಿನ ಮೇಲೆ ಬಿಡುಗಡೆಯಾದ ಎಎಪಿ ಸಂಸದ ಸಂಜಯ್ ಸಿಂಗ್ ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಕೂಡ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದರು. ಈ ಪ್ರಕರಣದಲ್ಲಿ ಇಬ್ಬರೂ ಎಎಪಿ ನಾಯಕರು ಸುಪ್ರೀಂ ಕೋರ್ಟ್ ನಿಂದ ಜಾಮೀನಿನ ಮೇಲೆ ಹೊರಗಿದ್ದಾರೆ.

Leave a Reply

Your email address will not be published. Required fields are marked *