ಮುಂಬೈ: ಡ್ರಗ್ ಪ್ರಕರಣದಲ್ಲಿ ಕಳೆದ ೨೧ ದಿನಗಳಿಂದ ಬಂಧನದಲ್ಲಿದ್ದ ಆರ್ಯನ್ ಖಾನ್’ಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
ನ್ಯಾಯಾಂಗ ಬಂಧನದಲ್ಲಿರುವ ಬಾಲಿವುಡ್ ನಟ ಶಾರೂಖ್ ಪುತ್ರ ಆರ್ಯನ್ ಸೇರಿದಂತೆ ಮೂವರ ಜಾಮೀನು ಅರ್ಜಿ ವಿಚಾರಣೆ ಮೂರನೇ ದಿನವಾದ ಇಂದು ಕೂಡ ನಡೆಯಿತು. ಜಾಮೀನಿಗೆ ಸಂಬಂಧಪಟ್ಟಂತೆ ಪರ-ವಿರೋಧ ವಕೀಲರ ವಾದವನ್ನು ಆಲಿಸಿದ ನ್ಯಾಯ ಮೂರ್ತಿ ನಿತಿನ್ ಸಾಂಬ್ರೆ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ಗೆ ಸೇರಿದಂತೆ ಮೂವರಿಗೆ ಜಾಮೀನು ನೀಡುವುದಕ್ಕೆ ಅನುಮತಿ ನೀಡಿದೆ.
ಆರ್ಯನ್ ಖಾನ್ ಸ್ನೇಹಿತ ಅರ್ಬಾಜ್ ಮರ್ಚೆಂಟ್ ಮತ್ತು ಮಾಡೆಲ್ ಮುನ್ಮುನ್ ಧಮೇಚಾ ಅವರ ಜಾಮೀನು ಅರ್ಜಿಯನ್ನು ಕೆಳ ನ್ಯಾಯಾಲಯ ತಿರಸ್ಕರಿಸಿತ್ತು ಇದರ ವಿರುದ್ದ ಆರೋಪಿಗಳ ಪರ ವಕೀಲರು ಮುಂಬೈನ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆಯನ್ನು ಅ.26ರಂದು ನಡೆಸುವುದಾಗಿ ಬಾಂಬೆ ಹೈಕೋರ್ಟ್ ನ್ಯಾಯಾಮೂರ್ತಿ ಎನ್. ಡಬ್ಲ್ಯು.ಸಾಂಬ್ರೆ ಅವರ ಏಕ ಸದಸ್ಯ ಪೀಠ ತಿಳಿಸಿತು.
ಸತತ ಮೂರು ದಿನಗಳ ಕಾಲ ನಡೆದ ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಪೀಠ ಇಂದು ಮೂವರು ಆರೋಪಿಗಳಿಗೆ ಜಾಮೀನು ನೀಡುವುದಕ್ಕೆ ಅಸ್ತು ಅಂದಿದ್ದೆ. ಮುಕುಲ್ ರೋಹಟಗಿ ಆರ್ಯನ್ ಖಾನ್ ಪರವಾಗಿ ನ್ಯಾಯಾಲಯದಲ್ಲಿ ವಾದಿಸಿ ದರು.