Thursday, 21st November 2024

ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿಗೆ ಮುನ್ನಡೆ

ವದೆಹಲಿ: ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಅವರು ಬಿಜೆಪಿಯ ಮಾಧವಿ ಲತಾ ವಿರುದ್ಧ ಮುನ್ನಡೆ ಸಾಧಿಸುವ ಮೂಲಕ ಹೈದರಾಬಾದ್ನಲ್ಲಿ ತಮ್ಮ ಹಿಡಿತವನ್ನು ಉಳಿಸಿಕೊಂಡಿದ್ದಾರೆ.

ಎಕ್ಸಿಟ್ ಪೋಲ್ ಪ್ರಕಾರ ತೆಲಂಗಾಣ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 7-10 ಸ್ಥಾನಗಳನ್ನು ಗೆಲ್ಲಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದಿದ್ದವು. ರಾಜ್ಯದ ಆಡಳಿತಾರೂಢ ಕಾಂಗ್ರೆಸ್ 5-8 ಸ್ಥಾನಗಳನ್ನು ಪಡೆಯಲಿದೆ ಎಂದು ಊಹಿಸಲಾಗಿತ್ತು. ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಮತ್ತು ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಸೇರಿದಂತೆ ಇತರರು 3-5 ಸ್ಥಾನಗಳನ್ನು ಗೆಲ್ಲಬಹುದು ಎಂದು ಸಮೀಕ್ಷೆ ತಿಳಿಸಿದೆ.

ಬಿಜೆಪಿ 19.65% ಮತಗಳೊಂದಿಗೆ ನಾಲ್ಕು ಸ್ಥಾನಗಳನ್ನು ಗಳಿಸಿದೆ. ಕಾಂಗ್ರೆಸ್ ಶೇ 29.79ರಷ್ಟು ಮತಗಳನ್ನು ಪಡೆದಿದ್ದು, ಕೇವಲ ಮೂರು ಸ್ಥಾನಗಳನ್ನು ಗಳಿಸಿದೆ. ಉಳಿದ ಸ್ಥಾನವನ್ನು ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಶೇಕಡಾ 2.80 ರಷ್ಟು ಮತಗಳೊಂದಿಗೆ ಪಡೆದುಕೊಂಡಿದೆ.