Wednesday, 11th December 2024

ಅಸನಿ ಭೀತಿ: ಚೆನ್ನೈನಿಂದ ಸಂಚರಿಸುವ 10 ವಿಮಾನ ರದ್ದು

ಚೆನ್ನೈ: ಅಸನಿ ಚಂಡಮಾರುತದ ಪರಿಣಾಮ ಆಂಧ್ರ ಪ್ರದೇಶ ಸೇರಿದಂತೆ ವಿವಿಧ ರಾಜ್ಯ ಗಳಲ್ಲಿ ಎರಡು ದಿನಗಳ ಕಾಲ ಮಳೆ ಯಾಗಲಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಚೆನ್ನೈನಿಂದ ಸಂಚಾರ ನಡೆಸುವ 10 ವಿಮಾನ ರದ್ದುಗೊಳಿಸಲಾಗಿದೆ.

ಹೈದರಾಬಾದ್, ವಿಶಾಖಪಟ್ಟಣಂ, ಜೈಪುರ, ಮುಂಬೈಗೆ ಸಂಚಾರ ನಡೆಸುವ 10 ವಿಮಾನ ಗಳನ್ನು ಚೆನ್ನೈ ವಿಮಾನ ನಿಲ್ದಾಣ ರದ್ದುಗೊಳಿಸಿದೆ.

ಮಂಗಳವಾರ ಮತ್ತು ಬುಧವಾರ ಅಸನಿ ಚಂಡಮಾರುತದ ಪ್ರಭಾವದಿಂದ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆಯಾಗಲಿದೆ. ಬುಧವಾರದ ನಂತರ ಚಂಡಮಾರುತದ ಅಬ್ಬರ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅಸನಿ ಚಂಡಮಾರುತದ ಪರಿಣಾಮ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ.