Wednesday, 11th December 2024

ಲಖಿಂಪುರ್ ಖೇರಿ: ಆಶಿಶ್ ಮಿಶ್ರಾಗೆ ಜಾಮೀನು

ಅಲಹಾಬಾದ್: ಲಖಿಂಪುರ್ ಖೇರಿ ಹಿಂಸಾಚಾರ ಘಟನೆಯ ಪ್ರಮುಖ ಆರೋಪಿ ಆಶಿಶ್ ಮಿಶ್ರಾ ಗೆ ಅಲಹಾಬಾದ್ ಹೈಕೋರ್ಟ್ ಗುರುವಾರ ಜಾಮೀನು ನೀಡಿದೆ.

ಕಳೆದ ಅಕ್ಟೋಬರ್ 3ರಂದು ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ಕೇಂದ್ರ ಸಚಿವ ಪುತ್ರ ಮಿಶ್ರಾ, ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಕಾರನ್ನು ಹತ್ತಿಸಿದ್ದರು. ಈ ಘಟನೆಯಿಂದಾಗಿ ನಾಲ್ವರು ಪ್ರತಿಭಟನಾ ನಿರತ ರೈತರು ಮೃತಪಟ್ಟಿದ್ದರು.

ಪ್ರಕರಣ ಸಂಬಂಧ ಮಿಶ್ರಾ ಅಲಹಾಬಾದ್ ಹೈಕೋರ್ಟ್’ಗೆ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆಯನ್ನು ನಡೆಸಿದ ನ್ಯಾಯಪೀಠವು, ಕೇಂದ್ರ ಸಚಿವ ಅಜಯ್ ಕುಮಾರ್ ಮಿಶ್ರಾ ಪುತ್ರ, ಅಶಿಶ್ ಮಿಶ್ರಾಗೆ ಜಾಮೀನು ಮಂಜೂರು ಮಾಡಿದೆ.