Saturday, 14th December 2024

ಅಸ್ಸಾಂ ಚುನಾವಣೆ: ಬಿಜೆಪಿಯ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ

ಗುವಾಹಟಿ: ಅಸ್ಸಾಂ ವಿಧಾನಸಭೆ ಚುನಾವಣೆಗೆ ಬಿಜೆಪಿಯು 40 ಮಂದಿ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರ ಸಚಿವರು ಹಾಗೂ ಬಿಜೆಪಿಯ ಹಿರಿಯ ಮುಖಂಡರು ಪಟ್ಟಿಯಲ್ಲಿದ್ದಾರೆ.

ಕರ್ನಾಟಕದ ಬಿಜೆಪಿ ಮುಖಂಡ ಹಾಗೂ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂತೋಷ್ ಈ ಪಟ್ಟಿಯಲ್ಲಿದ್ದಾರೆ.

ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಅಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ನಿತಿನ್ ಗಡ್ಕರಿ, ಅರ್ಜುನ್ ಮುಂಡಾ, ನರೇಂದ್ರ ಸಿಂಗ್ ತೋಮರ್, ಸ್ಮೃತಿ ಇರಾನಿ, ಜೀತೇಂದ್ರ ಸಿಂಗ್, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ , ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ್ ಸೊನೊವಾಲ್, ಹಣಕಾಸು ಸಚಿವ ಹಿಮಂತ್ ಬಿಸ್ವ ಶರ್ಮಾ ಇದ್ದಾರೆ.

ಮಾರ್ಚ್ 27ರಂದು ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಏಪ್ರಿಲ್ 1ರಂದು 39 ಕ್ಷೇತ್ರಗಳಿಗೆ ಎರಡನೆಯ ಹಂತ ಹಾಗೂ ಉಳಿದ 40 ಸೀಟುಗಳಿಗೆ ಏಪ್ರಿಲ್ 6ರಂದು ಮೂರನೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಪ್ರಾದೇಶಿಕ ಮಿತ್ರಪಕ್ಷ ಅಸೋಮ್ ಗಣ ಪರಿಷದ್ (ಎಜಿಪಿ), ಪಕ್ಷದ ಸಂಸ್ಥಾಪಕ ಅಧ್ಯಕ್ಷ ಪ್ರಫುಲ್ಲಾ ಕುಮಾರ್ ಮಹಾಂತ ಅವರ ಬದಲು ಬರ್ಹಾಂಪುರ ಕ್ಷೇತ್ರದಲ್ಲಿ ಬಿಜೆಪಿಗೆ ಸ್ಪರ್ಧಿಸಲು ಅವಕಾಶ ನೀಡಿದೆ.