Saturday, 23rd November 2024

ಅಟಲ್​ ಸುರಂಗ ಮಾರ್ಗ ಲೋಕಾರ್ಪಣೆ

ಶಿಮ್ಲಾ: ವಿಶ್ವದಲ್ಲೇ ಅತಿ ಉದ್ದವಾದ ಮತ್ತು ಕುದುರೆ ಲಾಳದ ಆಕಾರದ ಅಟಲ್​ ಸುರಂಗ ಮಾರ್ಗ ವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಲೋಕಾರ್ಪಣೆಗೊಳಿಸಿದರು.

ಹಿಮಾಲಚ ಪ್ರದೇಶದ ರೋಹ್ಟಾಂಗ್​ನಲ್ಲಿ ನಿರ್ಮಿಸಲಾಗಿರುವ ಸುರಂಗ ಮಾರ್ಗವೂ ಲೇಹ್​ ಮತ್ತು ಮನಾಲಿ ನಡುವೆ ಸುಮಾರು 46 ಕಿ.ಮೀ ಅಂತರ ವನ್ನು ತಗ್ಗಿಸಲಿದೆ.

ಈಗಾಗಲೇ ಪ್ರಧಾನಿ ಮೋದಿ ಅವರು ಸುರಂಗ ಉದ್ಘಾಟನೆಗಾಗಿ ವಿಶೇಷ ವಿಮಾನದಲ್ಲಿ ಮನಾಲಿಗೆ ಆಗಮಿಸಿದ್ದಾರೆ. ಜತೆಯಲ್ಲಿ ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಕೂಡ ಇದ್ದಾರೆ.