ಒಂದು ಫ್ಲ್ಯಾಟ್‌ನಲ್ಲಿ ಎರಡು ಕೋಣೆ, ಬೇಸಿಕ್ ಕಿಚನ್ ಸೆಟಪ್, ಒಂದು ಬಾತ್‌ರೂಮ್ ಇದೆ.
ಪ್ರಯಾಗರಾಜ್‌ನ ಲುಕುವಾರ್‌ಗಂಜ್ ಪ್ರದೇಶದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ 76 ಫ್ಲ್ಯಾಟ್‌ಗಳನ್ನು ನಿರ್ಮಿಸಲಾಗಿದೆ. ಫಲಾನುಭವಿಗಳಿಗೆ ಹಂಚಿಕೆ ಮಾಡುವ ಮೊದಲು ಯೋಗಿ ಆದಿತ್ಯನಾಥ್ ಅವರು ಅಪಾರ್ಟ್‌ಮೆಂಟ್ ವೀಕ್ಷಣೆ ಮಾಡಿದರು. ಬಳಿಕ 76 ಜನರಿಗೆ ಕೈಗೆಟಕುವ ದರದಲ್ಲಿ ಮನೆಗಳನ್ನು ನೀಡಿದರು. ಬಡವರನ್ನು ಗುರುತಿಸಿ, ಅವರಿಂದ ಕೇವಲ 3.5 ಲಕ್ಷ ರೂ. ಪಡೆದು ಫ್ಲ್ಯಾಟ್ ನೀಡಲಾ ಗಿದೆ.
2021ರ ಡಿಸೆಂಬರ್ನಲ್ಲಿ ಯೋಗಿ ಆದಿತ್ಯನಾಥ್ ಅವರು ಮನೆಗಳ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ್ದರು.
ಗ್ಯಾಂಗ್ಸ್ಟರ್ಗಳಿಂದ ವಶಪಡಿಸಿಕೊಂಡ ಜಾಗದಲ್ಲಿ ಬಡವರಿಗೆ ಮನೆ ನಿರ್ಮಿಸಿ ಕೊಡುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಗ್ಯಾಂಗ್ಸ್ಟರ್ ಜತೆಗೆ ರಾಜಕಾರಣಿಯೂ ಆಗಿದ್ದ ಅತೀಕ್ ಅಹ್ಮದ್ ಹಲವರ ಆಸ್ತಿ ಕಬಳಿಸಿದ್ದ. ಹಾಗಾಗಿ, ಆತನ ಅಕ್ರಮ ಆಸ್ತಿ ಯನ್ನು ಸರ್ಕಾರ ಜಪ್ತಿ ಮಾಡಿದೆ.