Wednesday, 11th December 2024

ಎಟಿಎಸ್’ನಿಂದ ಇಬ್ಬರು ಉಗ್ರರ ಬಂಧನ

ಲಖನೌ: ಅಲ್‌ ಖೈದಾ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಇಬ್ಬರು ಉಗ್ರರನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಭಾನುವಾರ ಬಂಧಿಸಿದೆ.

ಬಂಧಿತ ಉಗ್ರರಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ಮಾಹಿತಿ ನೀಡಿದ್ದಾರೆ. ಬಂಧಿತರನ್ನು ಸಿರಾಜ್ ಮತ್ತು ರಿಯಾಜ್ ಎಂದು ಗುರುತಿಸಲಾಗಿದೆ. ಘಟನಾ ಸ್ಥಳದಲ್ಲಿ ಸ್ಫೋಟಕಗಳು ಪತ್ತೆಯಾದ ನಂತರ ಲಖನೌ ಮತ್ತು ಪಕ್ಕದ ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಪ್ರದೇಶದಲ್ಲಿ ನಡೆಯಲಿದ್ದ ಭಯೋತ್ಪಾದಕ ಕೃತ್ಯದ ಸಾಧ್ಯತೆಗಳನ್ನು ಈ ಕಾರ್ಯಾಚರಣೆ ತಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.