Sunday, 15th December 2024

ಆಗಸ್ಟ್’ನಲ್ಲಿ 74 ಲಕ್ಷ ವಾಟ್ಸಾಪ್ ಖಾತೆ ನಿಷೇಧ

ನವದೆಹಲಿ: ಮೆಟಾ ಮಾಲೀಕತ್ವದ ತ್ವರಿತ ಸಂದೇಶ ಸೇವೆಯ ವಾಟ್ಸಾಪ್ ಆಗಸ್ಟ್ ತಿಂಗಳಿನಲ್ಲಿ ಭಾರತದಲ್ಲಿ 74 ಲಕ್ಷಕ್ಕೂ ಹೆಚ್ಚು ಖಾತೆಗಳನ್ನು ನಿಷೇಧಿಸಿದೆ.

ಆಗಸ್ಟ್ 1 ರಿಂದ 31ರ ನಡುವೆ ಒಂದು ತಿಂಗಳಿನಲ್ಲಿ ವಾಟ್ಸಾಪ್ ಕಂಪನಿಯು 74,20,748 ಖಾತೆಗಳನ್ನು ನಿಷೇಧಿಸಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

ಹೊಸ ಐಟಿ ನಿಯಮಗಳು 2021 ರ ಅನುಸಾರ ಮತ್ತು ಬಳಕೆದಾರರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ 74 ಲಕ್ಷಕ್ಕೂ ಹೆಚ್ಚು ವಾಟ್ಸಾಪ್ ಖಾತೆಗಳನ್ನು ನಿರ್ಬಂಧಿಸಲಾಗಿದೆ. ಸುಮಾರು 3,506,905 ಖಾತೆಗಳನ್ನು ಬಳಕೆದಾರ ರಿಂದ ಯಾವುದೇ ವರದಿಗಳು ಬರುವ ಮೊದಲು ಪೂರ್ವಭಾವಿಯಾಗಿ ನಿಷೇಧಿಸಲಾಗಿದೆ ಎಂದು ವಾಟ್ಸಾಪ್ ತನ್ನ ಮಾಸಿಕ ವರದಿಯಲ್ಲಿ ತಿಳಿಸಿದೆ.

ದೇಶದಲ್ಲಿ 500 ಮಿಲಿಯನ್‌ಗಿಂತಲೂ ಹೆಚ್ಚು ಬಳಕೆದಾರರನ್ನು ಹೊಂದಿರುವ ಅತ್ಯಂತ ಜನಪ್ರಿಯ ಸಂದೇಶ ರವಾನೆ ಸೇವೆಯ ವೇದಿಕೆಯು ಆಗಸ್ಟ್ ನಲ್ಲಿ ದೇಶದಲ್ಲಿ ಮತ್ತೊಂದು ದಾಖಲೆಯ 14,767 ದೂರು ವರದಿಗಳನ್ನು ಸ್ವೀಕರಿಸಿದ್ದು ಇದರಲ್ಲಿ 71 ಖಾತೆಗಳ ಮೇಲೆ ಕ್ರಮ ಕೈಗೊಳ್ಳಲಾಗಿದೆ.