Thursday, 12th December 2024

ಮಾ.8 ರಿಂದ ಆಸ್ಟ್ರೇಲಿಯಾ ಪ್ರಧಾನಿ ಭಾರತಕ್ಕೆ ಭೇಟಿ

ವದೆಹಲಿ: ವಿವಿಧ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಂಬಂಧ ವೃದ್ದಿಸುವ ಉದ್ದೇಶದಿಂದ ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರು ಮಾರ್ಚ್ 8 ರಿಂದ ಭಾರತಕ್ಕೆ ನಾಲ್ಕು ದಿನಗಳ ಭೇಟಿ ನೀಡಲಿದ್ದಾರೆ.

ಕಳೆದ ವರ್ಷ ಮೇ ತಿಂಗಳಲ್ಲಿ ಪ್ರಧಾನಿ ಸ್ಥಾನ ಅಲಂಕರಿಸಿದ ನಂತರ ಇದು ಅವರ ಮೊದಲ ಭಾರತ ಭೇಟಿಯಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರ ಆಹ್ವಾನದ ಮೇರೆಗೆ ಅಲ್ಬನೀಸ್ ಅವರ ನೇತೃತ್ವದ ಸಚಿವರು, ಅಧಿಕಾರಿಗಳ ನಿಯೋಗ ಮಾರ್ಚ್ 8 ರಿಂದ 11 ರವರೆಗೆ ಭಾರತ ಭೇಟಿ ನಡುವೆ ಹಲವು ರಾಜ್ಯಗಳಿಗೂ ಭೇಟಿ ನೀಡಲಿದ್ದಾರೆ.

ಹೋಳಿ ದಿನ (ಮಾರ್ಚ್ 8) ಅಲ್ಬನೀಸ್ ಅಹಮದಾಬಾದ್‍ಗೆ ಆಗಮಿಸಲಿದ್ದಾರೆ. ಮಾರ್ಚ್ 9 ರಂದು ಮುಂಬೈಗೆ ಭೇಟಿ ನೀಡಲಿದ್ದು, ನಂತರ ದೆಹಲಿಗೆ ಆಗಮಿಸಲಿದ್ದಾರೆ.

ಮಾರ್ಚ್ 10 ರಂದು ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ಆಸ್ಟ್ರೇಲಿಯಾದ ಪ್ರಧಾನಿಗೆ ವಿಧ್ಯುಕ್ತ ಸ್ವಾಗತವನ್ನು ನೀಡಲಾಗುವುದು.