ಅಯೋಧ್ಯಾ: ಅಯೋಧ್ಯೆಯಲ್ಲಿ 2024ರ ಜನವರಿಯಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮನ ಪ್ರಾಣ ಪ್ರತಿಷ್ಠೆ ನಡೆಯಲಿದೆ.
ಮುಂದಿನ ವರ್ಷ ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಲಲ್ಲಾನ ಮಂದಿರ ಲೋಕಾರ್ಪಣೆಗೊಳ್ಳಲಿದೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಆರ್.ಎಸ್.ಎಸ್ ಸರಸಂಘಚಾಲಕ್ ಮೋಹನ್ ಭಾಗವತ್ ಸೇರಿದಂತೆ ಗಣ್ಯಾತಿಗಣ್ಯರು ಭಾಗ ವಹಿಸಲಿದ್ದಾರೆ.
ದೀಪಾವಳಿ ಹಿನ್ನೆಲೆ ಅಯೋಧ್ಯೆಯಲ್ಲಿನ 51 ಘಾಟ್ಗಳಲ್ಲಿ 24 ಲಕ್ಷಕ್ಕೂ ಅಧಿಕ ದೀಪಗಳನ್ನು ಬೆಳಗಲು ಸಿದ್ಧತೆ ನಡೆಸಲಾಗಿದೆ. ದೀಪೋತ್ಸವ ಸಂಬಂಧ ರಾಮ ಜನ್ಮಭೂಮಿ ಪಥವನ್ನು ಹೂವುಗಳಿಂದ ಅಲಂಕಾರಗೊಳಿಸಲಾಗಿದೆ. ಸುಮಾರು 24 ಲಕ್ಷಕ್ಕೂ ಅಧಿಕ ಮಣ್ಣಿನ ದೀಪಗಳಿಂದ ದೀಪೋತ್ಸವ ಆಚರಿಸಲಾಗುತ್ತಿದ್ದು, ಈ ಮೂಲಕ ಗಿನ್ನೆಸ್ ದಾಖಲೆ ಬರೆಯಲು ಮುಂದಾಗಿದೆ. ದೀಪೋತ್ಸವದ ಶೋಭಾಯಾತ್ರೆ ಆರಂಭಗೊಂಡಿದ್ದು, ಈ ವೇಳೆ ಮಹಿಳೆ ಯರು ಸಾಂಪ್ರದಾಯಿಕ ಉಡುಪು ತೊಟ್ಟು ನೃತ್ಯ ಮಾಡಿದರು. ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳು ಭಾಗಿಯಾಗಿವೆ.
ಈ ಬುಡಕಟ್ಟು ಜನಾಂಗದವರು ಜಾರ್ಖಂಡ್ನ ಗುಡ್ಡಗಾಡುಗಳಲ್ಲಿ ವಾಸ ಮಾಡುತ್ತಾರೆ. ದೀಪೋತ್ಸವ ಆಚರಿಸಲು ಬರಿಗಾಲಿನಲ್ಲಿ ಅಯೋಧ್ಯೆಗೆ ಆಗಮಿಸಿದ್ದಾರೆ. ಜಾರ್ಖಂಡ್ ಪ್ರದೇಶ್ ಶ್ರೀರಾಮ ಜಾನಕಿ ಚಾರಿಟೇಬಲ್ ಟ್ರಸ್ಟ್ ಬುಡಕಟ್ಟು ಜನಾಂಗದವರನ್ನು ದೀಪೋತ್ಸವದಲ್ಲಿ ಕರೆತಂದಿದೆ. ನಾಳೆ ಬುಡಕಟ್ಟು ಜನರು ಸಿಎಂ ಯೋಗಿ ಆದಿತ್ಯನಾಥ್ ಜೊತೆಯಲ್ಲಿ ದೀಪೋತ್ಸವದಲ್ಲಿ ಭಾಗವಹಿಸಲಿದ್ದಾರೆ. ಈ ವೇಳೆ ಬುಡಕಟ್ಟು ಜನಾಂಗದವರು ಅವರ ಸಾಂಪ್ರದಾಯಿಕ ಉಡುಪನ್ನು ಧರಿಸಲಿದ್ದಾರೆ.