Saturday, 27th April 2024

ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ, ಅಂಗನವಾಡಿ ಸಹಾಯಕಿಯರಿಗೆ ಆಯುಷ್ಮಾನ್‌ ಯೋಜನೆ ವಿಸ್ತರಣೆ

ವದೆಹಲಿ: ದೇಶದ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಹಾಗೂ ಅಂಗನವಾಡಿ ಸಹಾಯಕಿಯರಿಗೆ ಆಯುಷ್ಮಾನ್‌ ಯೋಜನೆಯನ್ನು ವಿಸ್ತರಿಸ ಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಘೋಷಿಸಿದ್ದಾರೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, 2024-25ನೇ ಸಾಲಿನ ಮಧ್ಯಂತರ ಬಜೆಟ್ ಮಂಡಿಸುತ್ತಿದ್ದಾರೆ.

ಮಧ್ಯಂತರ ಬಜೆಟ್‌ ಭಾಷಣ ಆರಂಭಿಸಿರುವ ನಿರ್ಮಲಾ ಸೀತಾರಾಮನ್‌ ಅವರು, ಅಮೃತ್ ಪೀಠಿ, ಯುವಕರನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕೆಲಸ ಮಾಡುತ್ತಿದೆ. ರಾಷ್ಟ್ರೀಯ ಶಿಕ್ಷಣ ನೀತಿ 2020 ಪರಿವರ್ತನಾತ್ಮಕ ಸುಧಾರಣೆಗಳನ್ನು ತರುತ್ತಿದೆ ಎಂದರು.

ಪಿಎಂ ಶ್ರೀ ಗುಣಮಟ್ಟದ ಬೋಧನೆ ನೀಡುತ್ತಿದ್ದಾರೆ. ಸ್ಕಿಲ್ ಇಂಡಿಯಾ ಮಿಷನ್ 1.4 ಕೋಟಿ ಯುವಕರಿಗೆ ತರಬೇತಿ ನೀಡಿದೆ. 54 ಲಕ್ಷ ಯುವಕರಿಗೆ ಕೌಶಲ್ಯ ಮತ್ತು ಮರು ಕೌಶಲ್ಯವನ್ನು ನೀಡಿದೆ ಮತ್ತು 3,000 ಹೊಸ ಐಟಿಐಗಳನ್ನು ಸ್ಥಾಪಿಸಿದೆ ಎಂದು ಮಾಹಿತಿ ನೀಡಿದರು.

ಮೋದಿ ಸರ್ಕಾರದಲ್ಲಿ 7 ಐಐಟಿಗಳು, 16 ಐಐಐಟಿಗಳು, 7 ಐಐಎಂಗಳು, 15 ಏಮ್ಸ್ ಮತ್ತು 390 ವಿಶ್ವವಿದ್ಯಾಲಯಗಳಂಥ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಲಾಗಿದೆ ಎಂದು ಸೀತಾರಾಮನ್ ಹೇಳಿದರು.

ದೇಶದ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಹಾಗೂ ಅಂಗನವಾಡಿ ಸಹಾಯಕಿಯರಿಗೆ ಆಯುಷ್ಮಾನ್‌ ಯೋಜನೆಯನ್ನು ವಿಸ್ತರಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್‌ ಘೋಷಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!