Monday, 16th September 2024

ಹಿರಿಯ ನಾಯಕ ಅಜಂ ಖಾನ್ ಆರೋಗ್ಯ ಸ್ಥಿತಿ ಗಂಭೀರ

ಲಖನೌ: ಕೋವಿಡ್ ಸೋಂಕಿಗೆ ತುತ್ತಾಗಿ ಆಸ್ಪತ್ರೆ ಚಿಕಿತ್ಸೆ ಪಡೆಯುತ್ತಿರುವ ಸಮಾಜವಾದಿ ಪಕ್ಷದ ಹಿರಿಯ ನಾಯಕ ಅಜಂ ಖಾನ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ಆಮ್ಲಜನಕ ವ್ಯವಸ್ಥೆ ಅಳವಡಿಸಲಾಗಿದೆ ಎಂದು ತಿಳಿದುಬಂದಿದೆ.

ಅಜಂಖಾನ್ ಅವರ ಆರೋಗ್ಯ ಪರಿಸ್ಥಿತಿ ಕುರಿತು ಅವರು ದಾಖಲಾಗಿರುವ ಲಖನೌನ ಮೇದಾಂತ ಆಸ್ಪತ್ರೆ, ಖಾನ್ ಅವರ ಆರೋಗ್ಯ ಗಂಭೀರವಾಗಿದೆ. ಅವರಿಗೆ ಆಮ್ಲಜನಕ ವ್ಯವಸ್ಥೆ ಅಳವಡಿಸಲಾಗಿದ್ದು, ಆಸ್ಪತ್ರೆ ನುರಿತ ವೈದ್ಯರು ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಆಸ್ಪತ್ರೆ ಹೇಳಿಕೆಯಲ್ಲಿ ತಿಳಿಸಿದೆ.

ಅಜಂ ಖಾನ್ ಶ್ವಾಸಕೋಶದಲ್ಲಿ ಸೋಂಕು ಕಂಡುಬಂದ ಬಳಿಕ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗು ತ್ತಿದೆ. ಅವರ ಆರೋಗ್ಯ ಗಂಭೀರವಾಗಿದ್ದು ಅವರಿಗೆ ಆಮ್ಲಜನಕ ವ್ಯವಸ್ಥೆ ಅಳವಡಿಸಲಾಗಿದೆ.

ಸೀತಾಪುರ್ ಜೈಲಿನಿಂದ ಅಜಂ ಖಾನ್ ಮತ್ತು ಅವರ ಪುತ್ರನನ್ನು ಮೇ 9 ರಂದು ಕೋವಿಡ್ ಚಿಕಿತ್ಸೆಗಾಗಿ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Leave a Reply

Your email address will not be published. Required fields are marked *