ಮುಂಬೈ: ಮಹಾರಾಷ್ಟ್ರ ಮಾಜಿ ಸಚಿವ, ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ(Baba Siddique) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ನಾಲ್ಕನೇ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಹರೀಶ್ ಕುಮಾರ್ ಬಾಲಕ್ರಮ್(23)ನನ್ನು ಉತ್ತರಪ್ರದೇಶಸ ಬಹ್ರೈಚ್‌ನಲ್ಲಿ ಅರೆಸ್ಟ್ ಮಾಡಲಾಗಿದೆ. ಈತ ಸಿದ್ದಿಕಿ ಹತ್ಯೆಗೆ ಹಣಕಾಸಿನ ನೆರವು ನೀಡಿದ್ದ ಎನ್ನಲಾಗಿದೆ.
ಇನ್ನು ಈ ಬಗ್ಗೆ ಮುಂಬೈ ಅಪರಾಧ ಪತ್ತೆ ದಳದ ಅಧಿಕಾರಿಗಳು ಮಾಹಿತಿ ನೀಡಿದ್ದು, ಬಾಬಾ ಸಿದ್ದಿಕಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಪ್ರದೇಶ ಮೂಲದ ವ್ಯಕ್ತಿಯನ್ನು ಅರೆಸ್ಟ್ ಮಾಡಲಾಗಿದೆ. ಬಂಧಿತ ಆರೋಪಿ ಬಾಲಾಕ್ರಮ್ ಸ್ಕ್ರ್ಯಾಪ್ ಡೀಲರ್ ಆಗಿ ಪುಣೆಯಲ್ಲಿ ಕೆಲವ ಮಾಡುತ್ತಿದ್ದ. ಈತ ಸಿದ್ದಿಕಿ ಹತ್ಯೆಗೆ ನಡೆದ ಸಂಚಿನಲ್ಲಿ ಭಾಗಿಯಾಗಿದ್ದ. ಇನ್ನು ಸಿದ್ದಿಕಿ ಹತ್ಯೆ ಪ್ರಕರಣದಲ್ಲಿ ಮತ್ತಿಬ್ಬರು ಆರೋಪಿಗಳಾದ ಧರ್ಮರಾಜ್ ಮತ್ತು ಶಿವಪ್ರಸಾದ್ ಗೌತಮ್ ಬಾಲಕ್ರಮ್‌ನ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ಕೃತ್ಯಕ್ಕೂ ಮುನ್ನ ಹರೀಶ್ ಬಾಲಕ್ರಮ್ ಧರ್ಮರಾಜ್ ಮತ್ತು ಶಿವಪ್ರಸಾದ್ ಗೌತಮ್‌ಗೆ ಹೊಸ ಮೊಬೈಲ್ ಕೊಡಿಸಿದ್ದ. ಸಿದ್ದಿಕಿ ಹತ್ಯೆ ಬಗ್ಗೆ ಆತನಿಗೆ ಸಂಪೂರ್ಣ ಮಾಹಿತಿ ಇತ್ತು.
66 ವರ್ಷದ ಎನ್‌ಸಿಪಿ ನಾಯಕನ ಮೇಲೆ ಮುಂಬೈನ ಬಾಂದ್ರಾ ಪ್ರದೇಶದ ಖೇರ್ ನಗರದಲ್ಲಿ ಅವರ ಶಾಸಕ ಪುತ್ರ ಜೀಶಾನ್ ಸಿದ್ದಿಕಿ ಅವರ ಕಚೇರಿಯ ಹೊರಗೆ ಮೂವರು ವ್ಯಕ್ತಿಗಳು ದಾಳಿ ನಡೆಸಿದ್ದಾರೆ. ಆಘಾತಕಾರಿ ಸಂಗತಿಯೆಂದರೆ ದಸರಾ ಆಚರಣೆಯ ದಿನದಂದು ಪೊಲೀಸರು ಹೆಚ್ಚಿನ ಎಚ್ಚರಿಕೆ ವಹಿಸಿದ್ದ ದಿನದಂದು ಜನನಿಬಿಡ ರಸ್ತೆಯಲ್ಲಿ ಈ ದಾಳಿ ನಡೆಸಲಾಗಿದೆ. ಗಾಯಗೊಂಡ ಸಿದ್ದಿಕ್ಕಿ ಅವರನ್ನು ತಕ್ಷಣ ಲೀಲಾವತಿ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.
ಬಾಬಾ ಸಿದ್ದಿಕಿ ಅವರ ಹತ್ಯೆಯು ಮಹಾರಾಷ್ಟ್ರದ ಕಾನೂನು ಮತ್ತು ಸುವ್ಯವಸ್ಥೆಯನ್ನು ಪ್ರಶ್ನಿಸಲು ನಾಯಕರನ್ನು ಪ್ರೇರೇಪಿಸಿತು, ಕಾಂಗ್ರೆಸ್ ಮುಖಂಡ ರಶೀದ್ ಅಲ್ವಿ ಅವರು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕನ ಹತ್ಯೆಯ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು.
ಕೊಲೆ ತನಿಖೆಗೆ ಸಂಬಂಧಿಸಿದಂತೆ, ಮುಂಬೈ ಪೊಲೀಸರು ಮಹಾರಾಷ್ಟ್ರದಾದ್ಯಂತ 15 ತಂಡಗಳನ್ನು ನಿಯೋಜಿಸಿದ್ದಾರೆ ಮತ್ತು ಶೂಟರ್ಗಳಿಗೆ ವ್ಯವಸ್ಥಾಪನಾ ಬೆಂಬಲವನ್ನು ನೀಡಿದವರನ್ನು ಗುರುತಿಸಲು ತನಿಖೆ ನಡೆಯುತ್ತಿದೆ ಎಂದು ಮುಂಬೈನ ಅಪರಾಧ ವಿಭಾಗದ ಅಧಿಕಾರಿಯೊಬ್ಬರು ಸಂಜೆ ವರದಿ ಮಾಡಿದ್ದಾರೆ.
ಈ ಸುದ್ದಿಯನ್ನೂ ಓದಿ: Baba Siddiqui: ಬಾಬಾ ಸಿದ್ದಿಕಿ ಹಂತಕನಿಂದ ಸೋಶಿಯಲ್ ಮೀಡಿಯಾದಲ್ಲಿ KGF ಸಿನಿಮಾ ಡೈಲಾಗ್, BGM ಜತೆ ಎಚ್ಚರಿಕೆಯ ಪೋಸ್ಟ್