Wednesday, 11th December 2024

ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ 31 ವರ್ಷ: ಅಯೋಧ್ಯೆಯಲ್ಲಿ ಭದ್ರತೆ

ಅಯೋಧ್ಯೆ: ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ 31 ವರ್ಷ ತುಂಬಿದ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕೆ ಕ್ರಮವಾಗಿ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

ಡಿಸೆಂಬರ್ 6ಕ್ಕೆ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ 31 ವರ್ಷ ಪೂರೈಸುತ್ತದೆ. ಈ ಘಟನೆಯ ದಿನ ಯಾವುದೇ ಅಹಿತಕರ ಘಟನೆ ನಡೆಯದಂತೆ ಅಯೋಧ್ಯೆ ಪೊಲೀಸರು ನಗರದಲ್ಲಿ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆಗಳನ್ನು ಮಾಡಿದ್ದಾರೆ ಎಂದು ಹೇಳಿದರು. 1992ರಲ್ಲಿ ಬಾಬ್ರಿ ಮಸೀದಿ ಧ್ವಂಸವು ದೇಶದ ಹಲವಾರು ಭಾಗಗಳಲ್ಲಿ ಹಿಂಸಾಚಾರಕ್ಕೆ ಕಾರಣವಾಯಿತು. ನಗರಕ್ಕೆ ಭೇಟಿ ನೀಡುವ ಜನರ ಮೇಲೆ ಸಿಸಿಟಿವಿ ಕ್ಯಾಮೆರಾಗಳ ಮೂಲಕ ನಿಗಾ ಇಡಲಾಗಿದೆ ಮತ್ತು ಅವರ ಗುರುತಿನ ಚೀಟಿಗಳನ್ನು ಸಹ ಪರಿಶೀಲಿಸ ಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದರು.


ಪೊಲೀಸರು ಅಯೋಧ್ಯೆಯ ವಿವಿಧ ಪ್ರದೇಶಗಳಲ್ಲಿ ವಾಹನ ತಪಾಸಣೆಯನ್ನು ತೀವ್ರಗೊಳಿಸಿದ್ದಾರೆ. ‘ಅಯೋಧ್ಯೆಯ ವಿವಿಧ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ. ಹತ್ತಿರದ ಜಿಲ್ಲೆಗಳಿಂದ ಪೊಲೀಸ್ ಪಡೆಗಳನ್ನು ಸಹ ಕರೆಸಲಾಗಿದೆ.

ಯುಪಿ ಪೊಲೀಸರ ಪ್ರಾದೇಶಿಕ ಸಶಸ್ತ್ರ ಕಾನ್ಸ್ಟಾಬ್ಯುಲರಿ (ಪಿಎಸಿ) ಸಹ ಇಲ್ಲಿದೆ. ಅಹಿತಕರ ಘಟನೆಗಳನ್ನು ತಪ್ಪಿಸಲು ಸಮಗ್ರ ಪೊಲೀಸ್ ವ್ಯವಸ್ಥೆಯನ್ನು ರಚಿಸಲಾಗಿದೆ’ ಎಂದು ಹೇಳಿದರು.

ಡಿಸೆಂಬರ್ 6, 1992ರಂದು ಅಯೋಧ್ಯೆಯಲ್ಲಿ ‘ಕರ ಸೇವಕರ’ ದೊಡ್ಡ ಗುಂಪೊಂದು ಬಾಬ್ರಿ ಮಸೀದಿಯನ್ನು ಧ್ವಂಸ ಮಾಡಿದರು. ದೇಶದ ವಿವಿಧ ಭಾಗಗ ಳಲ್ಲಿ ಗಲಭೆಗಳು ಭುಗಿಲೆದ್ದವು, ಇದರಲ್ಲಿ 1,000 ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದರು.