ರಾಂಚಿ:ಮೇವು ಹಗರಣ ಪ್ರಕರಣದಲ್ಲಿ ಜೈಲು ವಾಸ ಅನುಭವಿಸುತ್ತಿರುವ ಆರ್.ಜೆ.ಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರಿಗೆ ಭಾರಿ ಹಿನ್ನಡೆಯಾಗಿದೆ. ಜಾರ್ಖಂಡ್ ಹೈಕೋರ್ಟ್ ಲಾಲೂ ಅವರ ಜಾಮೀನು ಅರ್ಜಿಯನ್ನ ವಜಾ ಮಾಡಿದೆ.
ಎರಡೂ ಕಡೆಯ ವಾದ-ವಿವಾದಗಳನ್ನು ಆಲಿಸಿದ ನ್ಯಾಯಮೂರ್ತಿ ಅಪರೇಶ್ ಕುಮಾರ್ ಸಿಂಗ್, ಲಾಲು ಯಾದವ್ ಅವರ ಜಾಮೀನು ಅರ್ಜಿಯನ್ನ ತಿರಸ್ಕರಿಸಿದ್ದಾರೆ.
ದುಮ್ಕಾ ಖಜಾನೆಯಿಂದ ಅಕ್ರಮವಾಗಿ ತೆರವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾಲು ಅವರು ಅರ್ಧ ಶಿಕ್ಷೆಯನ್ನ ಕಡಿತ ಗೊಳಿಸಲು ಜಾಮೀನು ಕೋರಿದ್ದರು. ಈ ಪ್ರಕರಣದಲ್ಲಿ ಸಿಬಿಐ ನ್ಯಾಯಾಲಯ ಅವರಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ.