Saturday, 14th December 2024

ಡಿ.ಕೆ.ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆಯನ್ನು ಇಡಿ ವಿಶೇಷ ನ್ಯಾಯಾಲಯ ಮುಂದೂಡಿದೆ.

ದೆಹಲಿಯ ಇಡಿ ವಿಶೇಷ ಕೋರ್ಟ್ ನಲ್ಲಿ ಇಂದು ವಿಚಾರಣೆ ನಡೆದಿದ್ದು, ಡಿ.ಕೆ.ಶಿವಕುಮಾರ್ ಅವರ ಜಾಮೀನಿಗೆ ಆಕ್ಷೇಪಣೆ ಸಲ್ಲಿಸಲು ಇಡಿ ಅಧಿಕಾರಿಗಳು ಸಮಯಾವಕಾಶ ಕೋರಿದ್ದಾರೆ. ಜುಲೈ 30ರಂದು ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ.

ಇದೇ ವೇಳೆ ಡಿ.ಕೆ.ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆಯನ್ನು ಜು.30ಕ್ಕೆ ಮುಂದೂಡಿ ನ್ಯಾಯಮೂರ್ತಿ ವಿಕಾಸ್ ಧುಲ್ ಪೀಠ ಆದೇಶ ಹೊರಡಿಸಿದೆ.