Saturday, 23rd November 2024

ಸುಧಾ ಭಾರದ್ವಾಜ್​ಗೆ ಬಾಂಬೆ ಹೈಕೋರ್ಟ್’ನಿಂದ ಜಾಮೀನು

Sudha Bharadwaj

#Sudha Bharadwajಮಹಾರಾಷ್ಟ್ರ : ಎಲ್ಗಾರ್ ಪರಿಷತ್​​​​ ಪ್ರಕರಣ(2018) ದಲ್ಲಿ ಆರೋಪಿಯಾಗಿದ್ದ ಹೋರಾಟಗಾರ್ತಿ ಸುಧಾ ಭಾರದ್ವಾಜ್​ಗೆ ಬಾಂಬೆ ಹೈಕೋರ್ಟ್ ಬುಧವಾರ ಜಾಮೀನು ನೀಡಿದೆ. ಜಾಮೀನಿ​ಗೆ ವಿಧಿಸಬೇಕಾದ ಷರತ್ತುಗಳನ್ನು ಡಿ.8ರಂದು ವಿಚಾರಣಾ ನ್ಯಾಯಾಲಯ ನಿರ್ಧಾರ ಮಾಡಲಿದೆ.

ಎಲ್ಗಾರ್ ಪರಿಷದ್​ ಪ್ರಕರಣ ಆರೋಪಿಗಳಾದ ಸುಧಾ ಭಾರದ್ವಾಜ್ ಮತ್ತು 8 ಮಂದಿ ಡಿಫಾಲ್ಟ್​ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಸುಧಾ ಭಾರದ್ವಾಜ್​ಗೆ ಮಾತ್ರ ಜಾಮೀನು ನೀಡಲಾಗಿದೆ. ಆಗಸ್ಟ್ 2018ರಿಂದ ಸುಧಾ ಜೈಲಿನಲ್ಲಿದ್ದು ಅವರನ್ನು ದೆಹಲಿ ಯಲ್ಲಿ ಬಂಧಿಸಿ ಮುಂಬೈಗೆ ಕರೆದೊಯ್ಯಲಾಗಿತ್ತು.

ಪ್ರಕರಣದಲ್ಲಿ ಆಂಧ್ರದ ಕ್ರಾಂತಿಕಾರಿ ಕವಿ ವರವರ ರಾವ್, ನಾಗರೀಕ ಹಕ್ಕುಗಳ ಹೋರಾಟಗಾರ್ತಿ ಸುಧಾ ಭಾರದ್ವಾಜ್, ಲೇಖಕ ಆನಂದ ತೆಲ್ತುಂಬ್ಡೆ, ಮಾನವ ಹಕ್ಕು ಕಾರ್ಯಕರ್ತ ಅರುಣ್, ಪತ್ರಕರ್ತ ಗೌತಮ್, ಮಾನವ ಹಕ್ಕುಗಳ ಕಾರ್ಯಕರ್ತೆ ಸುಸಾನ್ ಅಬ್ರಹಾಂ, ಸಾಮಾಜಿಕ ಹೋರಾಟಗಾರ ಗೊನ್ಸಾಲ್ವಿಸ್ ಅವರುಗಳನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದರು.

2018ರ ಜನವರಿ 1ರಂದು ಭೀಮಾ-ಕೋರೆಗಾಂವ್‌ ಯುದ್ಧದ 200ನೇ ವರ್ಷದ ವಿಜಯೋತ್ಸವದ ವೇಳೆ ನಡೆದ ಹಿಂಸಾಚಾರದಲ್ಲಿ ಒಬ್ಬ ಮೃತಪಟ್ಟು, 30 ಪೊಲೀಸರು ಗಾಯಗೊಂಡಿದ್ದರು. ಹೈದರಾಬಾದ್, ಮುಂಬೈ, ಫರಿದಾಬಾದ್, ದೆಹಲಿ ಸೇರಿದಂತೆ ಹಲವು ನಗರಗಳಲ್ಲಿ ಏಕಕಾಲದಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ.