ನವದೆಹಲಿ: ಭಾರತೀಯ ಸೇನೆ ಪಾಕಿಸ್ತಾನದ ಮೇಲೆ ನಡೆಸಿದ್ದ ಬಾಲಾಕೋಟ್ ಏರ್ ಸ್ಟ್ರೈಕ್ ನಲ್ಲಿ 300 ಉಗ್ರರು ಮೃತಪಟ್ಟಿರುವು ದಾಗಿ ಪಾಕಿಸ್ತಾನ ಕೊನೆಗೂ ಒಪ್ಪಿಕೊಂಡಿದೆ.
ಪಾಕಿಸ್ತಾನದ ಮಾಜಿ ರಾಯಭಾರಿ ಅಘಾ ಹಿಲಾಲಿ ಈ ಬಗ್ಗೆ ಹೇಳಿಕೆ ನೀಡಿದ್ದು, 2019 ರ ಫೆಬ್ರವರಿ 26 ರಂದು ನಡೆದ ಬಾಲಾ ಕೋಟ್ ಏರ್ ಸ್ಟ್ರೈಕ್ ನಲ್ಲಿ 300 ಉಗ್ರರು ಸಾವನ್ನಪ್ಪಿದ್ದಾರೆ ಎಂದಿದ್ದಾರೆ.
ಭಾರತ ಅಂತಾರಾಷ್ಟ್ರೀಯ ಗಡಿ ದಾಟಿ ಬಾಲಾಕೋಟ್ ಮೇಲೆ ದಾಳಿ ನಡೆಸಿತ್ತು. ಇದರಲ್ಲಿ 300 ಜನ ಸಾವನ್ನಪ್ಪಿದ್ದರು. ನಾನು ಪರೋಕ್ಷವಾಗಿ ಸರ್ಜಿಕಲ್ ಸ್ಟ್ರೈಕ್ನ್ನು ಒಪ್ಪಿಕೊಂಡಿದ್ದೇವೆ ಎಂದು ಹಿಲಾಲಿ ಹೇಳಿಕೆ ನೀಡಿದ್ದಾರೆ.
ನಮ್ಮ ಗುರಿ ಅವರ ಗುರಿಗಿಂತಲೂ ವಿಭಿನ್ನವಾಗಿತ್ತು ಎಂದು ಹೇಳಿದ್ದಾರೆ.