Saturday, 14th December 2024

ಬಾಲಾಕೋಟ್‌ ಘಟನೆ: ಉಗ್ರರ ಮಾರಣಹೋಮ ಒಪ್ಪಿಕೊಂಡ ಪಾಕ್‌

ನವದೆಹಲಿ: ಭಾರತೀಯ ಸೇನೆ ಪಾಕಿಸ್ತಾನದ ಮೇಲೆ ನಡೆಸಿದ್ದ ಬಾಲಾಕೋಟ್ ಏರ್ ಸ್ಟ್ರೈಕ್ ನಲ್ಲಿ 300 ಉಗ್ರರು ಮೃತಪಟ್ಟಿರುವು ದಾಗಿ ಪಾಕಿಸ್ತಾನ ಕೊನೆಗೂ ಒಪ್ಪಿಕೊಂಡಿದೆ.

ಪಾಕಿಸ್ತಾನದ ಮಾಜಿ ರಾಯಭಾರಿ ಅಘಾ ಹಿಲಾಲಿ ಈ ಬಗ್ಗೆ ಹೇಳಿಕೆ ನೀಡಿದ್ದು, 2019 ರ ಫೆಬ್ರವರಿ 26 ರಂದು ನಡೆದ ಬಾಲಾ ಕೋಟ್ ಏರ್ ಸ್ಟ್ರೈಕ್ ನಲ್ಲಿ 300 ಉಗ್ರರು ಸಾವನ್ನಪ್ಪಿದ್ದಾರೆ ಎಂದಿದ್ದಾರೆ.

ಭಾರತ ಅಂತಾರಾಷ್ಟ್ರೀಯ ಗಡಿ ದಾಟಿ ಬಾಲಾಕೋಟ್ ಮೇಲೆ ದಾಳಿ ನಡೆಸಿತ್ತು. ಇದರಲ್ಲಿ 300 ಜನ ಸಾವನ್ನಪ್ಪಿದ್ದರು. ನಾನು ಪರೋಕ್ಷವಾಗಿ ಸರ್ಜಿಕಲ್ ಸ್ಟ್ರೈಕ್​ನ್ನು ಒಪ್ಪಿಕೊಂಡಿದ್ದೇವೆ ಎಂದು ಹಿಲಾಲಿ ಹೇಳಿಕೆ ನೀಡಿದ್ದಾರೆ.

ನಮ್ಮ ಗುರಿ ಅವರ ಗುರಿಗಿಂತಲೂ ವಿಭಿನ್ನವಾಗಿತ್ತು ಎಂದು ಹೇಳಿದ್ದಾರೆ.