Thursday, 3rd October 2024

ದೆಹಲಿಯಲ್ಲಿ ಪಟಾಕಿ ನಿಷೇಧ ಮುಂದುವರಿಕೆ

ವದೆಹಲಿ : ರಾಜಧಾನಿ ದೆಹಲಿಯಲ್ಲಿ ಪಟಾಕಿ ನಿಷೇಧ ಕಾನೂನು ಮುಂದುವರೆದಿದೆ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.

ದೀಪಾವಳಿ ಹಬ್ಬದ ವೇಳೆ ದೆಹಲಿಯಲ್ಲಿ ಪಟಾಕಿ ಸಿಡಿಸುವಂತಿಲ್ಲ, ಪಟಾಕಿ ನಿಷೇಧ ಹಿಂಪಡೆಯಲು ಆಗಲ್ಲ ಎಂದು ಸ್ಪಷ್ಟಪಡಿಸಿದೆ. ದೆಹಲಿಯಲ್ಲಿ ಎಲ್ಲಾ ರೀತಿಯ ಪಟಾಕಿಗಳ ಉತ್ಪಾದನೆ, ಸಂಗ್ರಹಣೆ, ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಕಳೆದ ವರ್ಷದಂತೆ ಈ ಬಾರಿಯೂ ದೆಹಲಿಯ ಜನರನ್ನು ಮಾಲಿನ್ಯದ ಅಪಾಯದಿಂದ ರಕ್ಷಿಸಲು, ಎಲ್ಲಾ ರೀತಿಯ ಪಟಾಕಿಗಳ ಉತ್ಪಾದನೆ, ಸಂಗ್ರಹಣೆ, ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸ ಲಾಗಿದೆ. ಇದರಿಂದ ಜನರ ಜೀವಗಳನ್ನು ಉಳಿಸಬಹುದು.

ಈ ಬಾರಿ ದೆಹಲಿಯಲ್ಲಿ ಆನ್ಲೈನ್ ಮಾರಾಟ ಮತ್ತು ಪಟಾಕಿಗಳ ವಿತರಣೆ ನಿಷೇಧಿಸಲಾಗಿದೆ. ಈ ನಿಷೇಧವು ಜನವರಿ 1, 2023 ರವರೆಗೆ ಜಾರಿಯಲ್ಲಿರುತ್ತದೆ.

ಜನವರಿ 1 ರವರೆಗೆ ಎಲ್ಲಾ ರೀತಿಯ ಪಟಾಕಿಗಳ ಉತ್ಪಾದನೆ, ಮಾರಾಟ ಮತ್ತು ಬಳಕೆ ನಿಷೇಧಿಸಲಾಗುವುದು ಎಂದು ದೆಹಲಿ ಪರಿಸರ ಸಚಿವ ಗೋಪಾಲ್ ರೈ ಹೇಳಿದ್ದರು.