Wednesday, 11th December 2024

ಆಕಸ್ಮಿಕವಾಗಿ ಬಂದೂಕು ಸಿಡಿದು ಯೋಧ ಹುತಾತ್ಮ

ಬಂಡಿಪೋರಾ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ತಮ್ಮ ಸಹೋದ್ಯೋಗಿ ಆಕಸ್ಮಿಕವಾಗಿ ಬಂದೂಕನ್ನು ಒತ್ತಿದ್ದರಿಂದ ಓರ್ವ ಸೇನಾ ಯೋಧ ಮೃತಪಟ್ಟು, ಮತ್ತೊಬ್ಬ ಯೋಧ ಗಾಯಗೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಪೊಲೀಸರ ಹೇಳಿಕೆಯ ಪ್ರಕಾರ, ಆರೋಪಿ ಸೇನಾ ಸಿಬ್ಬಂದಿಯನ್ನು ವಶಕ್ಕೆ ಪಡೆಯಲಾಗಿದೆ ಮತ್ತು ಘಟನೆ ಕುರಿತು ತನಿಖೆಯನ್ನು ಪ್ರಾರಂಭಿಸಲಾಗಿದೆ.