ನವದೆಹಲಿ: ದೇಶಾದ್ಯಂತ ಕಳೆದ ಕೆಲವು ತಿಂಗಳಿಂದ ಬಾಂಬ್ ಬೆದರಿಕೆ ಕರೆಗಳು ಬರುತ್ತಲೇ ಇವೆ. ರೈಲು, ವಿಮಾನ, ಶಾಲೆ ಆಸ್ಪತ್ರೆ, ಹೊಟೇಲ್ ಹೀಗೆ ಎಲ್ಲೆಂದರಲ್ಲಿ ಬಾಂಬ್ ಸ್ಫೋಟಿಸುವುದಾಗಿ ಕಿಡಿಗೇಡಿಗಳು ಹುಸಿ ಬಾಂಬ್ ಬೆದರಿಕೆ ಸಂದೇಶ ಕಳುಹಿಸುವ ಮೂಲಕ ಆತಂಕ ಸೃಷ್ಟಿಸುತ್ತಿದ್ದಾರೆ. ಇದರ ಬೆನ್ನಲ್ಲೇ ಇದೀಗ ಅಯೋಧ್ಯೆ(Ayodhya)ಯಲ್ಲಿ ರಾಮ ಮಂದಿರ(Ram Mandir)ವನ್ನು ನೆಲಸಮಗೊಳಿಸಿ ಅಲ್ಲೇ ಮಸೀದಿಯನ್ನು ಮತ್ತೆ ಕಟ್ಟುತ್ತೇವೆ ಎಂದು ಬಾಂಗ್ಲಾದೇಶದ ಇಸ್ಲಾಮಿಸ್ಟ್ ಉಗ್ರ ಸಂಘಟನೆ(Bangla Terrorists) ಪ್ರತಿಜ್ಞೆ ಮಾಡುವ ಮೂಲಕ ಭಾರತದ ವಿರುದ್ಧ ಬಹಿರಂಗ ಬೆದರಿಕೆ ಹಾಕಿದೆ.
ಎಕ್ಸ್ನಲ್ಲಿ ವಿಡಿಯೊವೊಂದು ಭಾರೀ ವೈರಲ್ ಆಗುತ್ತಿದ್ದು, ಬಾಂಗ್ಲಾದೇಶಿ ಉಗ್ರನೊಬ್ಬ ಸಾರ್ವಜನಿಕ ಭಾಷಣ ಮಾಡುತ್ತಿರುವುದನ್ನು ಆ ವಿಡಿಯೊದಲ್ಲಿ ಕಾಣಬಹುದಾಗಿದೆ. ಸ್ವಲ್ಪ ಹೊತ್ತು ಕಾಯಿರಿ. ಇಸ್ಲಾಮಿಕ್ ಯುವಕರೇ, ನಿಮ್ಮ ಬಳಿ ಏನಿದೆಯೋ ಅದರೊಂದಿಗೆ ಸಿದ್ಧರಾಗಿರಿ, ಏಕೆಂದರೆ ಭಾರತದ ಮೇಲೆ ದಾಳಿ ಮಾಡಬೇಕು. ನಾವು ರಾಮ ಮಂದಿರವನ್ನು ನೆಲಸಮಗೊಳಿಸಿ ಮತ್ತೆ ಮಸೀದಿಯನ್ನು ನಿರ್ಮಿಸುತ್ತೇವೆ. ನರೇಂದ್ರ ಮೋದಿ ಅವರ ಎರಡೂ ಕೆನ್ನೆಗಳಿಗೆ ಶೂಗಳಿಂದ ಹೊಡೆಯುತ್ತೇನೆ. ಆಟವನ್ನು ಅವರೊಂದಿಗೆ ಆಡುತ್ತೇವೆ, ನಾವು ಸಿದ್ಧರಿದ್ದೇವೆ” ಎಂದು ತೀವ್ರಗಾಮಿ ಬಾಂಗ್ಲಾದೇಶಿ ಇಸ್ಲಾಮಿಸ್ಟ್ ಘೋಷಿಸಿದ್ದಾನೆ.
🚨#BreakingNews🚨🚨🚨
— Bangladeshi Hindus Community🚨🇧🇩 (@Hindubd49346) November 18, 2024
🇧🇩Extremist groups in #Bangladesh have made troubling calls about Narendra Modi and the Ram Mandir.
Can Hindus stay safe?😊
I urge the international community to consider #sanctions on Bangladesh and for India to take action‼️‼️@TulsiGabbard @marcorubio pic.twitter.com/IV50IQ9uS4
ಇನ್ನು ಬಾಂಗ್ಲಾದೇಶದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರು, ವಿಶೇಷವಾಗಿ ಹಿಂದೂ ಸಮುದಾಯದ ಸುರಕ್ಷತೆಯ ಬಗ್ಗೆ ಹೆಚ್ಚುತ್ತಿರುವ ಕಳವಳಗಳ ಮಧ್ಯೆ ಈ ವಿಡಿಯೊ ಭಾರ ವೈರಲ್ ಆಗುತ್ತಿದೆ. ಶೇಖ್ ಹಸೀನಾ ಅಧಿಕಾರದಿಂದ ನಿರ್ಗಮಿಸಿದ ಬಳಿಕ ಬಾಂಗ್ಲಾದೇಶದಲ್ಲಿ ಕೋಮು ಉದ್ವಿಗ್ನತೆ ನಿರಂತರವಾಗಿ ಹೆಚ್ಚುತ್ತಿದೆ. ಮೂಲಭೂತವಾದಿಗಳು ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರಿಗೆ ಮತ್ತು ವಿಶೇಷವಾಗಿ ಹಿಂದೂಗಳಿಗೆ ಸಾಕಷ್ಟು ಕಾಟ ನೀಡುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಚಿತ್ತಗಾಂಗ್ ಮೂಲದ ಇಸ್ಲಾಮಿಕ್ ಸಂಘಟನೆ ಹೆಫಾಜತ್-ಎ-ಇಸ್ಲಾಂ, ಇಸ್ಕಾನ್ (ISKCON) ಅನ್ನು ನಿಷೇಧಿಸುವಂತೆ ಒತ್ತಾಯಿಸಿತ್ತು.
ಲೇಖಕಿ ತಸ್ಲೀಮಾ ನಸ್ರೀನ್ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್ ಪ್ರಕಾರ, ಚಟ್ಟೋಗ್ರಾಮ್ನಲ್ಲಿ ಇತ್ತೀಚೆಗೆ ನಡೆದ ಜಾಥದಲ್ಲಿ, ‘ಇಸ್ಕಾನ್ ಅನ್ನು ನಿಷೇಧಿಸಿ, ಇಲ್ಲವೇ ಭಕ್ತರನ್ನು ಕೊಲ್ಲುತ್ತೇವೆ’ ಎಂಬ ಹಿಂಸಾತ್ಮಕ ಘೋಷಣೆಗಳನ್ನು ಕೂಗಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ರಾಧಾರಾಮನ್ ದಾಸ್ ಅವರು ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ. “ಬಾಂಗ್ಲಾದೇಶಿ ಮುಸ್ಲಿಮರು ಇಸ್ಕಾನ್ ಅನ್ನು ನಿಷೇಧಿಸುವಂತೆ ಮೊಹಮ್ಮದ್ ಯೂನಸ್ಗೆ ಸೂಚನೆ ನೀಡಿದ್ದಾರೆ. ಇಲ್ಲವಾದಲ್ಲಿ ಇಸ್ಕಾನ್ ಭಕ್ತರನ್ನು ಹಿಡಿದು ಬರ್ಬರವಾಗಿ ಕೊಲ್ಲುತ್ತೇವೆಂದು ಎಚ್ಚರಿಕೆ ನೀಡಿದ್ದಾರೆಂದು,” ಎಂದು ತಾವು ಹಂಚಿಕೊಂಡಿರುವ ವಿಡಿಯೊಗೆ ಈ ರೀತಿ ಬರೆದುಕೊಂಡಿದ್ದರು.
ಈ ಸುದ್ದಿಯನ್ನೂ ಓದಿ: Viral News: 7 ದಿನಗಳಲ್ಲಿ ದೇಶ ಬಿಟ್ಟು ತೊಲಗಿ; ಬಾಂಗ್ಲಾದೇಶದ ಹಿಂದೂಗಳಿಗೆ ಬೆದರಿಕೆ