ನವದೆಹಲಿ: ನ್ಯಾಷನಲ್ ಹೆರಾಲ್ಡ್ ನ್ಯೂಸ್ ಪೇಪರ್ ಗೆ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ, ಕಾಂಗ್ರೆಸ್ ಮುಖಂಡ ಪವನ್ ಕುಮಾರ್ ಬನ್ಸಾಲ್ ಮಂಗಳವಾರ ಇಡಿ ವಿಚಾರಣೆಗೆ ಹಾಜರಾದರು.
ಸೆಂಟ್ರಲ್ ದೆಹಲಿಯಲ್ಲಿನ ಜಾರಿ ನಿರ್ದೇಶನಾಲಯದ ಹೊಸ ಕಚೇರಿಗೆ ದಾಖಲೆಗಳೊಂದಿಗೆ ಆಗಮಿಸಿದ ಮಾಜಿ ಕೇಂದ್ರ ಸಚಿವ ಬನ್ಸಾಲ್ , ಅವರನ್ನು ಇಡಿ ಅಧಿಕಾರಿಗಳು ಪ್ರಶ್ನಿಸಿದ್ದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಪಿಎಂಎಲ್ ಎ ಕಾಯ್ದೆಯಡಿ ಅವರ ಹೇಳಿಕೆಯನ್ನು ಇಡಿ ದಾಖಲಿಸಿರುವುದಾಗಿ ಹೇಳಿ ದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಇಡಿ ವಿಚಾರಣೆ ನಡೆಸಿತ್ತು. ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ ಮಾಲಿಕತ್ವದ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಅಸೋಸಿಯೇಟೆಡ್ ಜರ್ನಲ್ ಲಿಮಿಟೆಡ್ ನಿಂದ ಪ್ರಕಟವಾಗುತಿತ್ತು.