ಶ್ರೀನಗರ: ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ(Jammu and Kashmir) ಪದೇ ಪದೆ ಉಗ್ರರ ದಾಳಿ ನಡೆಯುತ್ತಿದ್ದು, ಬಾರಾಮುಲ್ಲಾ(Baramulla Encounter) ಜಿಲ್ಲೆಯಲ್ಲಿ ಶುಕ್ರವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹೊಡೆದುರುಳಿಸಲಾಗಿದೆ(Terror Encounter). ಇನ್ನು ಹತರಿಂದ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.
ಕಾಶ್ಮೀರ ವಲಯ ಪೊಲೀಸರ (Kashmir Zone Police) ಹೇಳಿಕೆ ಪ್ರಕಾರ ಹತರಾಗಿರುಚ ಉಗ್ರರ ಗುರುತು ಪತ್ತೆಗೆ ತನಿಖೆ ನಡೆಸಲಾಗುತ್ತಿದೆ ಮತ್ತು ಮೃತರಿಂದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಇತರ ದೋಷಾರೋಪಣೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಶಸ್ತ್ರಸಜ್ಜಿತ ಉಗ್ರಗಾಮಿಗಳ ಚಲನವಲನದ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತು. ನಂತರ ಸೋಪೋರ್‌ನ ಸಾಗಿಪೋರಾ ಪ್ರದೇಶದಲ್ಲಿ ಗುರುವಾರ ಸಂಜೆ ಸೇನಾ ಪಡೆ ಕಾರ್ಯಾಚರಣೆ ಪ್ರಾರಂಭಿಸಿತ್ತು. ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Two #terrorists have been neutralised in #Sopore #encounter. Identification & affiliation is being ascertained. Incriminating materials, arms & ammunition recovered. Further details shall follow.@JmuKmrPolice https://t.co/ooEXp5xSOO
— Kashmir Zone Police (@KashmirPolice) November 8, 2024
ಶುಕ್ರವಾರ ಬೆಳಗ್ಗೆಯೂ ಕಾರ್ಯಾಚರಣೆ ನಡೆದಿದ್ದು, ಉಳಿದ ಉಗ್ರರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಕಾರ್ಯಾಚರಣೆಯಲ್ಲಿ ಎರಡರಿಂದ ಮೂರು ಉಗ್ರರ ಗುಂಪು ಸಿಕ್ಕಿ ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.
#WATCH | Jammu & Kashmir | Security Forces personnel have neutralised two terrorists in Sopore encounter
— ANI (@ANI) November 8, 2024
Kashmir Zone Police says, "Identification & affiliation (of neutralised terrorists) is being ascertained. Incriminating materials, arms & ammunition recovered."
Visuals… pic.twitter.com/zyfGKsQSJH
ಕಾಶ್ಮೀರದಲ್ಲಿ ಉಗ್ರರ ದಾಳಿ ಹೆಚ್ಚಾಗಿದ್ದು, ಸೇನೆ ಹಾಗೂ ನಾಗರಿಕನ್ನು ಗುರಿಯಾಗಿಸಿಕೊಂಡು ದಾಳಿಗಳು ನಡೆಯುತ್ತಿವೆ. ಗುರುವಾರ ಕಿಶ್ತ್ವಾರ್ ಜಿಲ್ಲೆಯಲ್ಲಿ ಉಗ್ರರ ದಾಳಿ ನಡೆದಿದ್ದು ವಿಲೇಜ್ ಡಿಫೆನ್ಸ್ ಗಾರ್ಡ್‌ಗಳನ್ನು (ವಿಡಿಜಿ) ಹತ್ಯೆ ಮಾಡಿದ್ದರು.
ಇದನ್ನೂ ಓದಿ: Terror Attack: ಜಮ್ಮು & ಕಾಶ್ಮೀರದಲ್ಲಿ ಮತ್ತೆ ಉಗ್ರರ ದಾಳಿ; ಇಬ್ಬರು ವಿಲೇಜ್ ಡಿಫೆನ್ಸ್ ಗಾರ್ಡ್‌ಗಳ ಹತ್ಯೆ
No words are strong enough to condemn the heinous terrorist attack on VDG members in Kishtwar. I convey my heartfelt condolences to the families of brave sons martyred in this cowardly attack. We are firmly resolved to destroy all terror outfits & avenge this barbaric act.
— Office of LG J&K (@OfficeOfLGJandK) November 7, 2024
ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ದುಃಖವನ್ನು ವ್ಯಕ್ತಪಡಿಸಿದ್ದಾರೆ, ಹತ್ಯೆಗಳನ್ನು ಬಲವಾಗಿ ಖಂಡಿಸಿದ್ದಾರೆ ಮತ್ತು ಸಂತ್ರಸ್ತರಿಗೆ ನ್ಯಾಯ ಕೊಡಿಸಲು ಪಡೆಯಲು ಭಯೋತ್ಪಾದಕ ಗುಂಪುಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಕೂಡ ವಿಡಿಜಿ(VDG) ಮೇಲಿನ ದಾಳಿಯನ್ನು ಖಂಡಿಸಿದ್ದು ಇಂತಹ ದಾಳಿಗಳನ್ನು ತಡೆಯಲು ಸುಧಾರಿತ ಭದ್ರತಾ ಕ್ರಮಗಳ ಅಗತ್ಯದ ಬಗ್ಗೆ ಟ್ವೀಟ್ ಮಾಡಿದ್ದಾರೆ.