Thursday, 19th September 2024

ಕೋವಿಡ್ ಲಸಿಕೆ ವಿಚಾರದಲ್ಲಿ ಸರ್ವಸನ್ನದ್ಧರಾಗಿರಿ: ಪ್ರಧಾನಿ ಕರೆ

ನವದೆಹಲಿ: ಕೋವಿಡ್ ಲಸಿಕೆ ಬಗ್ಗೆ ನಿರ್ಲಕ್ಷ್ಯ ಬೇಡ. ಯಾವುದೇ ಸಂದರ್ಭದಲ್ಲಾದರೂ ಲಸಿಕೆ ಬರಬಹುದು. ಈ ಕುರಿತು ಸರ್ವ ಸನ್ನದ್ಧರಾಗುವಂತೆ ರಾಜ್ಯ ಸರ್ಕಾರಗಳಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ಕೋವಿಡ್ ವಿಚಾರವಾಗಿ ಪ್ರಧಾನಿ ಮೋದಿ ಮಂಗಳವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಿದ್ದು, ಸಭೆಯಲ್ಲಿ ಆಯಾ ರಾಜ್ಯಗಳ ಕೊರೊನಾ ಸ್ಥಿತಿಗತಿ, ಲಸಿಕೆ ಬಗ್ಗೆ ಚರ್ಚೆ ನಡೆಸಿದರು.

ಶೀಘ್ರದಲ್ಲಿಯೇ ಕೊರೊನಾ ಲಸಿಕೆ ಲಭ್ಯವಾಗಲಿದೆ. ವಿಜ್ಞಾನಿಗಳು ಅವರ ಕೆಲಸಗಳನ್ನು ಮಾಡುತ್ತಿದ್ದಾರೆ. ಯಾವುದೇ ಸಂದರ್ಭ ದಲ್ಲಿ ಕೂಡ ಲಸಿಕೆ ಲಭ್ಯವಾಗಬಹುದು. ಎಲ್ಲಾ ರಾಜ್ಯಗಳು ಸಿದ್ಧತೆ ಮಾಡಿಕೊಳ್ಳಿ. ಲಸಿಕೆ ಬರುತ್ತೆ ಎಂದು ಕೋವಿಡ್ ನಿರ್ವಹಣೆ ಯಲ್ಲಿ ನಿರ್ಲಕ್ಷ್ಯ ಬೇಡ. ಲಸಿಕೆ ಬಂದ ಬಳಿಕವೂ ಉತ್ಪಾದನೆಗೆ ಕೆಲ ಸಮಯಾವಕಾಶ ಬೇಕು. ಹಾಗಾಗಿ ಅಲ್ಲಿಯವರೆಗೂ ಉದಾಸೀನ ಬೇಡ. ಕೋವಿಡ್ ಮರಣ ಪ್ರಮಾಣವನ್ನು ಕಡಿಮೆಯಾಗುವಂತೆ ನೋಡಿಕೊಳ್ಳಿ ಎಂದು ರಾಜ್ಯಗಳಿಗೆ ಸೂಚಿಸಿದ್ದಾರೆ.

ಪ್ರಧಾನಿ ಮೋದಿಯವರು, ಮಂಗಳವಾರ ಮಹಾರಾಷ್ಟ್ರ, ಕೇರಳ, ಪಶ್ಚಿಮ ಬಂಗಾಳ, ಗುಜರಾತ್, ಛತ್ತೀಸ್ಗಢ, ರಾಜಸ್ಥಾನ,  ನವ ದೆಹಲಿ ಮತ್ತು ಹರ್ಯಾಣ ಮುಂತಾದ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಪರೆನ್ಸ್ ಮೂಲಕ ಕೋವಿಡ್ ಲಸಿಕೆ ಹಾಗೂ ಕೋವಿಡ್ ಸೋಂಕನ್ನು ಹರಡದಂತೆ ನಿಯಂತ್ರಿಸುವ ಕುರಿತು ಚರ್ಚೆ ನಡೆಸಿದರು.

 

Leave a Reply

Your email address will not be published. Required fields are marked *